ಹಾಸನ

ಕೆಜೆಪಿ ತಳಮಟ್ಟದಿಂದ ಕಟ್ಟಲು ಪ್ರಯತ್ನ

Published On :

ಕ.ಪ್ರ.ವಾರ್ತೆ , ಅರಸೀಕೆರೆ , ಆ.30
ತಾಲೂಕಿನಲ್ಲಿ ಕೆಜೆಪಿ ಪಕ್ಷವನ್ನು ಕೆಳಮಟ್ಟದಿಂದ ಸದೃಢವಾಗಿ ಕಟ್ಟುವ ನಿಟ್ಟಿನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಬಲಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕೆಜೆಪಿ ಮುಖಂಡ ಕಾಟೀಕೆರೆ ಮೋಹನ್, ಜಯದೇವ್, ಚಂದ್ರಶೇಖರ್, ಕಣಕಟ್ಟೆ ಕುಮಾರ್ ಇನ್ನಿತರರು ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಪಕ್ಷದ ಸ್ಥಿತಿಗತಿಗಳನ್ನು ಕುರಿತು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್  ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ಸೇರಿದಂತೆ ಇನ್ನಿತರ ನಾಯಕರನ್ನು ಖುದ್ದು ಭೇಟಿ ಮಾಡಿ ಚುನಾವಣೆ ನಂತರ ನಡೆದಿರುವ ವಿದ್ಯಮಾನಗಳನ್ನು ಗಮನಕ್ಕೆ ತರಲಾಗುವುದು ಎಂದರು.
ಕ್ಷೇತ್ರದಲ್ಲಿ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಪಕ್ಷದ ವಿರುದ್ಧ ಇಲ್ಲಸಲ್ಲದ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಅಂತಹ ಯಾವುದೇ ಬೆಳವಣಿಗೆಗಳು ಪಕ್ಷದಲ್ಲಿ ನಡೆದಿಲ್ಲ. ಪಕ್ಷ ಅಸ್ತಿತ್ವಕ್ಕೆ ಬಂದು ಕೇವಲ 5-6 ತಿಂಗಳು ಕಳೆದಿವೆ ಅಷ್ಟೆ. ಸೋಲನ್ನು ಸವಾಲಾಗಿ ಸ್ವೀಕರಿಸಿ ಚುನಾವಣೆ ಗೆಲ್ಲುವ ಸಾಮರ್ಥ್ಯ ಹೊಂದಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಮರ್ಥವಾಗಿ ಕಟ್ಟಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.
ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಕ್ಷೇತ್ರದ ಮತದಾರರು 26ಸಾವಿರ ಮತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ಪಕ್ಷದ ಸಂಘಟನೆ ಅನಿವಾರ್ಯವಾಗಿದೆ.  ಪಕ್ಷ ಸಂಘಟನೆಗೆ ಹೊಸ ಕಾರ್ಯತಂತ್ರ ರೂಪಿಸಲಾಗುವುದೆಂದರು. ಪಿಸಿಯೋ ಮಧು, ರೇವಣ್ಣ ಹಲವು ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.