ಅಂಗಾಂಶ ಕೃಷಿ ಬಾಳೆ ಬೇಸಾಯ ಕುರಿತು ಮಾಹಿತಿ ಶಿಬಿರ
ಕನ್ನಡಪ್ರಭ ವಾರ್ತೆ, ಚನ್ನರಾಯಪಟ್ಟಣ , ಆ.30
ತಾಲೂಕಿನ ಊಪೀನಹಳ್ಳಿಯಲ್ಲಿ ಮಡೆನೂರು ಕೃಷಿ ಕಾಲೇಜಿನ ವಿದ್ಯಾರ್ಥಿಗಳು ಕೃಷಿಯಲ್ಲಿ ಜೈವಿಕ ತಂತ್ರಜ್ಞಾನ ಹಾಗೂ ಅಂಗಾಂಶ ಕೃಷಿ ಬಾಳೆ ಬೇಸಾಯ ಕುರಿತು ರೈತರಿಗೆ ಅಗತ್ಯ ಮಾಹಿತಿ ನೀಡಿದರು.
ಹಾಸನ ಕೃಷಿ ಮಹಾವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಯೋಜನೆಯಡಿ ಕಳೆದ ಹತ್ತು ದಿನಗಳಿಂದ ಗ್ರಾಮದ ರೈತರೊಂದಿಗೆ ಬೆರೆತು ಕೃಷಿಯಲ್ಲಿನ ಸಮಸ್ಯೆ, ಪರಿಹಾರ, ಕೈಗೊಳ್ಳಬಹುದಾದ ಕ್ರಮದ ಕುರಿತು ಪ್ರಾತ್ಯಕ್ಷಿಕೆ ಸೇರಿದಂತೆ ಹಲವು ಕಾರ್ಯಕ್ರಮ ನಡೆಸಿದರು.
ರೈತರಿಗೆ ಜೈವಿಕ ತಂತ್ರಜ್ಞಾನ ಹಾಗೂ ಅಂಗಾಂಶ ಕೃಷಿ ಬಾಳೆ ಬೇಸಾಯ ಕುರಿತು ಸಂಪೂರ್ಣ ಮಾಹಿತಿಯನ್ನು ನಾಟಕ ರೂಪದಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ರೈತರಿಗೆ ತಿಳಿಸಲಾಯತು. ಹಾಗೂ ಬಾಳೆ ಬೇಸಾಯದಲ್ಲಿ ಅನುಸರಿಸಬೇಕಾದ ಕ್ರಮಗಳು ಮತ್ತು ಅದರಿಂದ ಉತ್ತಮ ಇಳುವರಿ, ಅಧಿಕಲಾಭ ಪಡೆಯುವ ಕುರಿತು ಮನವರಿಕೆ ಮಾಡಿ ಕೊಡಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಜೈವಿಕ ತಂತ್ರಜ್ಞಾನ ವಿಭಾಗದ ಡಾ.ಎನ್.ನಾಗೇಶ್, ತೋಟಗಾರಿಕೆ ವಿಭಾಗ ಡಾ.ನಿರ್ಮಲ ಕೆ.ಎಸ್. ಸಸ್ಯರೋಗ ಶಾಸ್ತ್ರ ವಿಭಾಗದ ಡಾ.ಜಿ.ನಾಗೇಶ್, ಮಂಜುನಾಥ್, ಜಿ.ಎಂ.ಗಡ್ಡಿ ಇದ್ದರು.
ಗ್ರಾಮೀಣ ಕೃಷಿ ಕಾರ್ಯಾನುಭವದ ವಿದ್ಯಾರ್ಥಿ ಅಜರ್ಪಾಷ, ನರಸಿಂಹರೆಡ್ಡಿ, ನರೇಶ್, ಪ್ರಶಾಂತಿ, ವಾಣಿಶ್ರೀ, ಪ್ರೇಮ, ನೇತ್ರ ಈ ವಿಶೇಷ ಕೃಷಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

