ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಪ್ರತಿಭಟನೆ
ಕ.ಪ್ರ.ವಾರ್ತೆ , ಹಾಸನ , ಆ.30
ಈಜಿಪ್ಟ್‌ನಲ್ಲಿ ಪ್ರಜಾಪ್ರಭುತ್ವದ ಸ್ಥಾಪನೆಗೆ ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರುವುದು ಸೇರಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಈಜಿಪ್ಟ್‌ನಲ್ಲಿ ಪ್ರಜಾತಾಂತ್ರಿಕ ವ್ಯವಸ್ಥೆಯನ್ನು ಕಿತ್ತೆಸೆದು ಸೇನಾಡಳಿತ ಹೇರಲಾಗಿದೆ. ಪ್ರಜಾಪ್ರಭುತ್ವಕ್ಕಾಗಿ ಧ್ವನಿ ಎತ್ತುವವರ ಮೇಲೆ ಸೇನೆ ದೌರ್ಜನ್ಯ ಎಸಗುತ್ತಿದೆ. ಈ ಎಲ್ಲಾ ಬೆಳವಣಿಗೆಯ ನಡುವೆಯೂ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಮೌನವಾಗಿರುವುದು ದುರಾದೃಷ್ಟದ ಸಂಗತಿ. ಭಾರತವು ತನ್ನ ಮೌನವನ್ನು ಮುರಿದು ಈಜಿಪ್ಟ್‌ನಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡವನ್ನು ಹೇರಬೇಕು ಎಂದು ಒತ್ತಾಯಿಸಿದರು.
ಈ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು ಹಾಗೂ ಈಜಿಪ್ಟ್ ಸೇನಾಡಳಿತದೊಂದಿಗೆ ಎಲ್ಲಾ ರಾಜತಾಂತ್ರಿಕ ಸಂಬಂಧ ಕಡಿದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಜಾಪ್ರಭುತ್ವದ ಹೆಸರಿನಲ್ಲಿ ಅಫ್ಘಾನಿಸ್ತಾನ ಮತ್ತು ಇರಾಕ್ ಮೇಲೆ ದಾಳಿ ಮಾಡಿದ ಪಾಶ್ಚಿಮಾತ್ಯ ರಾಷ್ಟ್ರಗಳು ಈಜಿಪ್ಟ್ ವಿಚಾರದಲ್ಲಿ ಮೌನವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಈ ಸೇನಾದಂಗೆಯನ್ನು ಪಾಶ್ಚಿಮಾತ್ಯ ರಾಷ್ಟ್ರಗಳು ಎಂದೂ ಖಂಡಿಸಿಲ್ಲ. ಅಮೆರಿಕ ಮಿಲಿಯನ್ ಗಟ್ಟಲೆ ಡಾಲರ್‌ನ್ನು ನೆರವಿನ ರೂಪದಲ್ಲಿ ಸೇನಾಡಳಿತಕ್ಕೆ ನೀಡಿದೆ. ಅಮೆರಿಕ ಮತ್ತು ಇಸ್ರೇಲ್ ದೇಶಗಳು ಅರಬ್ ಜಗತ್ತನ್ನು ಅಸ್ತಿರಗೊಳಿಸಲು ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.
ಭಾರತ ಸೇನಾಡಳಿತದ ಈಜಿಪ್ಟ್‌ನೊಂದಿಗಿನ ಎಲ್ಲಾ ರೀತಿಯ ರಾಜತಾಂತ್ರಿಕ ಸಂಬಂಧ ಕೈಬಿಡಬೇಕು ಮತ್ತು ಮಹಮ್ಮದ್‌ಮರ್ಸಿರನ್ನು ಮತ್ತೆ ದೇಶದ ಅಧ್ಯಕ್ಷರನ್ನಾಗಿ ನಿಯೋಜಿಸುವಂತೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮುಖಂಡ ಸೂಫಿ ಇಬ್ರಾಹಿಂ, ಫೈರೋಜ್‌ಪಾಷಾ, ವಾಸೀಂ, ನೂರ್ ಉಲ್ಲಾ, ಸೈಯದ್, ಪರ್ವೀಜ್, ದಲಿತ ಮಖಂಡ ಸತೀಶ್, ನಾಗರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

