ಇಂದಿನಿಂದ ಜಾತ್ರೆ
ಗುಬ್ಬಿ: ಪಟ್ಟಣದ ಶ್ರೀಸಿಡಿಲು ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಪರೇವು ಸೆ. 1 ಮತ್ತು 2ರಂದು ನಡೆಯಲಿದೆ. ಇದೇ ಸಂದರ್ಭದಲ್ಲಿ ಮುತ್ತೈದೆಯರಿಗೆ ಮಡಿಲು ತುಂಬುವ ಕಾರ್ಯಕ್ರಮ ನಡೆಯಲಿದೆ.
ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಜನ್ಮದಿನಾಚರಣೆ
ಹಾಸನ: ಕ್ರೀಡೆಯ ಬಗೆಗಿನ ಪ್ರೀತಿ ಕೇವಲ ಭಾಷಣದ ಮಾತುಗಳಾಗದೆ, ಅದು ಪ್ರತಿಯೊಬ್ಬನ ಪ್ರವೃತ್ತಿ ಯಾಗಬೇಕು ಎಂದು ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ ಜಯಣ್ಣ ಹೇಳಿದರು.
ಮೊಸಳೆ ಹೊಸಹಳ್ಳಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಾಷ್ಟೀಯ ಕ್ರೀಡಾದಿನ ಹಾಗೂ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
'ಭಾರತೀಯ ಸಂಸ್ಕೃತಿ ಬೆಳೆಸುವಲ್ಲಿ ಸ್ತ್ರೀಯರ ಪಾತ್ರ ಮಹತ್ವದ್ದು'
ಹಾಸನ: ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸ್ತ್ರೀಯರ ಅದರಲ್ಲೂ ಯುವತಿಯರ ಪಾತ್ರ ಮಹತ್ವದ್ದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಎನ್.ರಾಜಮ್ಮ ತಿಳಿಸಿದರು. ನಗರದ ವಾಣಿವಿಲಾಸ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರತರಲು ಇಲಾಖೆಯು ತಾಲೂಕು ಮಟ್ಟದಿಂದ ರಾಜ್ಯಮಟ್ಟದವರೆಗೆ ನಾನಾ ಹಂತಗಳಲ್ಲಿ ಸ್ಪರ್ಧೆಗಳನ್ನು ಏರ್ಪಡಿಸುತ್ತಿದ್ದು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳುವುದರ ಮೂಲಕ ಇದರ ಸದುಪಯೋಗಪಡಿಸಿ ಕೊಳ್ಳಬೇಕೆಂದರು. ಅರ್ಥಶಾಸ್ತ್ರ ಉಪನ್ಯಾಸಕ ಎಂ.ಆರ್.ಶಾಂತೇಗೌಡ ಮಾತನಾಡಿ, ಯುವಜನಾಂಗ ಪಾಶ್ಚಾತ್ಯ ಸಂಸ್ಕೃತಿಗೆ ಮರುಳಾಗಿ ನಮ್ಮ ಮೂಲ ಸಂಸ್ಕೃತಿಯನ್ನು ಮರೆಯುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಆರ್.ನಟೇಶ್ ಮಾತನಾಡಿ, ಓದಿನಲ್ಲಿರುವ ಶ್ರದ್ಧೆ ಮತ್ತು ಶಿಸ್ತನ್ನು ಕ್ರೀಡೆಯಲ್ಲಿಯೂ ಅಳವಡಿಸಿಕೊಂಡು ಯಶಸ್ಸು ಸಾಧಿಸಲು ತಿಳಿಸಿದರು. ನಗರಸಭಾ ಸದಸ್ಯ ರಮೇಶ್‌ಬಾಬು ಇದ್ದರು. ಭವಾನಿ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

