ಪ್ರತಿಭೆ ಹೊರತರಲು ಸಾಂಸ್ಕೃತಿಕ ಚಟುವಟಿಕೆ ಅಗತ್ಯ: ಸರೋಜಮ್ಮ
ಕ.ಪ್ರ.ವಾರ್ತೆ ಅರಸೀಕೆರೆ ಆ. 31
ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಂಸ್ಕೃತಿಕ ಪ್ರತಿಭೆಯನ್ನು ಹೊರತಂದು ಅನಾವರಣ ಗೊಳಿಸುವ ಸದುದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಕಲಾಪ್ರತಿಭೆಯನ್ನು ಹೊರಜಗತ್ತಿಗೆ ಪರಿಚಯಿಸುವ ಮೂಲಕ ಶಿಕ್ಷಣ ಸಂಸ್ಥೆಗೆ ಉತ್ತಮ ಹೆಸರು ತಂದುಕೊಡಬೇಕೆಂದು ಪ್ರಾಂಶುಪಾಲರಾದ ಟಿ. ಸರೋಜಮ್ಮ ತಿಳಿಸಿದರು.
ಪಟ್ಟಣದ ಹೊಯ್ಸಳೇಶ್ವರ ಪದವಿ ಕಾಲೇಜಿನಲ್ಲಿ ತರಳಬಾಳು ನಿಧಿ ವತಿಯಿಂದ ಅಂತರ ಶಾಲಾ ಕಾಲೇಜು ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಅವರು, ಕಾಲೇಜು ಹಂತದಲ್ಲಿ ವಿಜೇತರನ್ನು ಸಿರಿಗೆರೆಯ ಕೇಂದ್ರಮಟ್ಟಕ್ಕೆ ಕಳುಹಿಸಿಕೊಡಲಾಗುವುದು ಎಂದರು.ಸಿರಿಗೆರೆಯಲ್ಲಿ ಅಂತಿಮ ಸ್ಪರ್ಧೆ ನಡೆಯಲಿದ್ದು ಅಲ್ಲಿ ತಮ್ಮ ಕಲಾಪ್ರತಿಭೆ ಪ್ರದರ್ಶಿಸಿ ವಿಜೇತರಿಗೆ ಸೆ. 24ರಂದು ಬಹುಮಾನ ವಿತರಿಸಲಾಗುವುದು ಎಂದರು.
ಪ್ರಾದೇಶಿಕ ಅಧಿಕಾರಿ ಡಿ.ಶಿವಸ್ವಾಮಿ ಮಾತನಾಡಿ ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಎಲ್ಲ ರಂಗಗಳಲ್ಲೂ ತಮ್ಮ ಪ್ರತಿಭೆಯನ್ನು ತೋರುವ ಮೂಲಕ ತಮ್ಮಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರಹಾಕಿದರೆ ಉತ್ತಮ ಜೀವನ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಮೈಸೂರಿನ ತರಳಬಾಳು ಪ್ರೌಢಶಾಲೆ, ಬೆಂಗಳೂರಿನ ದೊಡ್ಡಆಲದ ಮರ ಗಣಪತಿಹಳ್ಳಿ ಶಾಲೆ ಸೇರಿದಂತೆ ಹಲವು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪ್ರಾಧ್ಯಾಪಕ ಪ್ರಭು ಸ್ವಾಗತಿಸಿದರು. ವಾಣಿಜ್ಯ ವಿಭಾಗ ಮುಖ್ಯಸ್ಥ ಬಾಲರಾಜು ನಿರೂಪಿಸಿದರು. ಪ್ರಾಧ್ಯಾಪಕ ಶಿವಲಿಂಗಪ್ಪ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

