ಯಡಿಯೂರಪ್ಪ, ರಾಜ್ಯ ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ
ಅರಸೀಕೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಘಟಕವು ಒಂದೇ ನಾಣ್ಯದ ಎರಡು ಮುಖಗಳಿದಂತೆ. ಆದಕಾರಣ ಡಿ.10ರೊಳಗೆ ಬಿಜೆಪಿ ಪಕ್ಷ ಸೇರುವ ವಿಶ್ವಾಸವನ್ನು ಮಾಜಿ ಸಚಿವ ವಿ. ಸೋಮಣ್ಣ ಭಾನುವಾರ ವ್ಯಕ್ತಪಡಿಸಿದರು.
ತಾಲೂಕಿನ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠಕ್ಕೆ ಭೇಟಿ ನೀಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಸಂಕಷ್ಠಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅನೇಕ ಜನಪರ ಹೋರಾಟಗಳ ಮೂಲಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಹಲವು ಕಾರಣಾಂತರ ಬೇರೆ ಹೋಗಿದ್ದರು, ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಬಿಜೆಪಿ ಪಕ್ಷ ಹೋರಾಟ ನಡೆಸುತ್ತಿದ್ದು, ಅದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅವಶ್ಯಕತೆ ಇದ್ದು ಇದೇ ಡಿ.10ರೊಳಗೆ ಅವರು ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ರಾಷ್ಟ್ರ ಮತ್ತು ರಾಜ್ಯದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರು ಪಕ್ಷಕ್ಕೆ ಸೇರಿಕೊಂಡ 3 ತಿಂಗಳಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ಸದೃಢವಾಗಿ ಕಟ್ಟವರು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರಾಜ್ಯದ ಕಬ್ಬು ಬೆಳೆಗಾರರ ಸಂಕಷ್ಠಕ್ಕೆ ಸ್ಪಂದಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೋರಿದ ಉದಾಸೀನತೆ ಮನೋಭಾವನೆ ರೈತನ ಆತ್ಮಹತ್ಯೆಗೆ ಕಾರಣವಾಗಿದೆ. ಪ್ರತಿಭಟನೆ ನಡೆಸುತ್ತಿದ್ದ ರೈತರ ಬಳಿಗೆ ತೆರಳಿ ಅವರ ಮನವಿ ಕೇಳುವ ವ್ಯವದಾನವನ್ನು ಮುಖ್ಯಮಂತ್ರಿ ಪ್ರದರ್ಶಿಸಿದರೇ ಇಂತಹ ಅನಾಹುತ ನಡೆಯುತ್ತಿರಲ್ಲಿಲ್ಲ. ಆದರೆ ಈ ಘಟನೆಯನ್ನು ಹಾವೇರಿಯಲ್ಲಿ ನಡೆದ ಗೋಲಿಬಾರ್ಗೆ ತಳಕು ಹಾಕುವುದು ಸರಿಯಲ್ಲ. ಆಗಿರುವ ತಪ್ಪನ್ನು ಸಮರ್ಥಿಸುವುದು ಬಿಟ್ಟು ತಪ್ಪುಗಳು ಪುನರಾವರ್ತನೆ ಆಗದಂತೆ ಸರ್ಕಾರ ಎಚ್ಚರ ವಹಿಸುವುದು ಸರಿಯಾದ ಮಾರ್ಗವೆಂದು ಸಮರ್ಥಿಸಿಕೊಂಡರು.
ಮಾಜಿ ಮುಖ್ಯಮಂತ್ರಿ ಬಿಎಸ್ವೈ ಶಾದಿಭಾಗ್ಯ ಯೋಜನೆ ಬಗ್ಗೆ ಅಷ್ಟೊಂದು ಮಹತ್ವ ಕೊಡುವ ಅಗತ್ಯತೆ ಇರಲ್ಲಿಲ್ಲ. ಯಾವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಬಗ್ಗೆ ಅವರು ಚಿಂತನೆ ನಡೆಸಿ ತೀರ್ಮಾನಕ್ಕೆ ಬರಬೇಕಾಗಿತ್ತು. ಅವರ ಈ ಹೋರಾಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಅನುಕೂಲವಾಯಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರೇಣುಕುಮಾರ್, ಕಾರ್ಯದರ್ಶಿ ಜಿ.ವಿ.ಟಿ. ಬಸವರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

