ಇಂದು ಜಿಲ್ಲಾ ಕಸಾಪದಿಂದ ದೇಸಿ ಉತ್ಸವ
ಕ.ಪ್ರ.ವಾರ್ತೆ ಹೊಳೆನರಸೀಪುರ ನ.1
ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನ.2ರಂದು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿರುವ ದೇಸೀ ಉತ್ಸವದಲ್ಲಿ ಹೊಳೆನರಸೀಪುರದ ಜಾನಪದ ಕಲಾವಿದ ತಂಬೂರಿ ಮರಿಯಪ್ಪ ಅವರಿಗೆ ಜಾನಪದ ಜಂಗಮ ದಿ. ಎಸ್.ಕೆ.ಕರೀಂಖಾನ್ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಗೆ ಭಾಜನರಾಗಿರುವ ಜಾನಪದ ಕಲಾವಿದ ತಂಬೂರಿ ಮರಿಯಪ್ಪ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್.ಜನಾರ್ದನ್ ಪರಿಷತ್ತಿನ ಪದಾಧಿಕಾರಿಗಳೊಂದಿಗೆ ಪಟ್ಟಣದಲ್ಲಿರುವ ತಂಬೂರಿ ಮರಿಯಪ್ಪ ನಿವಾಸಕ್ಕೆ ತೆರಳಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದರು.
ಡಾ.ಎಚ್.ಎಲ್.ಜನಾರ್ದನ್ ಮಾತನಾಡಿ, ತಂಬೂರಿ ಮರಿಯಪ್ಪ ಅವರಿಗೆ ನೀಡಲಾಗುತ್ತಿರುವ ಎಸ್.ಕೆ.ಕರೀಂಖಾನ್ ಪ್ರಶಸ್ತಿಯು ಪಾರಿತೋಷಕ, ಪ್ರಶಸ್ತಿ ಪತ್ರ ಹಾಗೂ 5 ಸಾವಿರ ರು. ನಗದು ಬಹುಮಾನ ಹೊಂದಿರುತ್ತದೆ ಎಂದು ತಿಳಿಸಿದರು.
ಪ್ರಶಸ್ತಿಯನ್ನು ಕಾರ್ಯಕ್ರಮದಲ್ಲಿ ಅರಕಲಗೂಡು ಪೊಟ್ಯಾಟೋ ಕ್ಲಬ್ ಸಂಸ್ಥಾಪಕ ಯೋಗಾರವುಶ್ ನೀಡುವರು. ಇದೇ ಸಂದರ್ಭದಲ್ಲಿ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರ ದೇಸೀ ಸಂಸ್ಕೃತಿ ಕಲಾ ತಂಡದ ವತಿಯಿಂದ ದೇಸೀ ಉತ್ಸವ ಏರ್ಪಡಿಸಲಾಗಿದೆ ಎಂದು ಹೇಳಿದರು.
ಕಲಾವಿದ ತಂಬೂರಿ ಮರಿಯಪ್ಪ ಸಾಧನೆ ಕುರಿತಂತೆ ಈ ಹಿಂದೆ ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿ ಗಮನ ಸೆಳೆದಿತ್ತು. ಪರಿಷತ್ತಿನ ತಾಲೂಕು ಘಟಕ ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ, ಕಾರ್ಯದರ್ಶಿ ಕುಮಾರಸ್ವಾಮಿ, ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರೇಮಾ ಮಂಜುನಾಥ್, ಸಾಹಿತಿ ಹಾಗೂ ಉಪನ್ಯಾಸಕ ಡಿ.ಕೆ.ಕುಮಾರಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

