ಹಾಸನ

ಏಡ್ಸ್ ದಿನಾಚರಣೆ; ಇಂದು ಸೈಕಲ್ ಜಾಥಾ

Published On :

ಹಾಸನ: ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ಸಂತ ಜೋಸೆಫರ ವಿದ್ಯಾಲಯಗಳ ಸಮೂಹ, ಸ್ವಯಂ ಸೇವಾ ಸಂಸ್ಥೆ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕಾರ್ಯಕ್ರಮವು ಡಿ.2ರಂದು ಬೆಳಗ್ಗೆ 11ಕ್ಕೆ ನಗರದ ಸಾಲಗಾಮೆ ರಸ್ತೆಯ ಸಂತ ಜೋಸೆಫ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಏಡ್ಸ್ ಅನ್ನು ಸೊನ್ನೆಗೆ ತನ್ನಿ ಕುರಿತು ಡಿ.2ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ವಿದ್ಯಾರ್ಥಿಗಳ ವಿಶೇಷ ಸೈಕಲ್ ಜಾಥಾ ನಡೆಯಲಿದೆ. ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಚಾಲನೆ ನೀಡುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಕಾರ್ಯಕ್ರಮ ಉದ್ಘಾಟಿಸುವರು. ಜನಜಾಗೃತಿ ಆಂದೋಲನ ಕಾರ್ಯಕ್ರಮದ ಉದ್ಘಾಟನೆಯನ್ನು ಹಾಸನ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದ ನಿರ್ದೇಶಕ ಡಾ. ಎನ್. ರಾಚೇಗೌಡ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಫಾದರ್ ಜರಾಲ್ಡ್ ವಹಿಸುವರು. ಕಾರ್ಯಕ್ರಮ ಕುರಿತು ಡಾ. ಪಿ.ಎಲ್. ನಟರಾಜ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಉಪನ್ಯಾಸ ನೀಡುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ಯಾಮಲಾದೇವಿ, ಜಿಲ್ಲಾ ಶಸ್ತ್ರ ಚಿಕಿತ್ಸಕ  ಡಾ. ಶಂಕರ್, ಡಾ. ಸುಧೀರ್ ಜಿ. ಬೆಂಗಳೂರೆ, ರಂಗಸ್ವಾಮಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.