'ಜೆಡಿಎಸ್ ಶಾಸಕರ ಆರೋಪ ಸರಿಯಲ್ಲ'
ಅರಸೀಕೆರೆ: ಸರ್ಕಾರದ ಅಧಿಕೃತ ಕಾರ್ಯಕ್ರಮಕ್ಕೆ ಸಚಿವರೊಂದಿಗೆ ಶಾಸಕರು ಹೋದಾಗ ಆಡಳಿತ ಕಾಂಗ್ರೆಸ್ ಪಕ್ಷದವರು ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಕ್ಷೇತ್ರದ ಜೆಡಿಎಸ್ ಶಾಸಕರು ಮಾಡಿರುವ ಆರೋಪ ಸರಿಯಲ್ಲ ಎಂದು ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಅಣ್ಣಾನಾಯಕನಹಳ್ಳಿ ವಿಜಯಕುಮಾರ್ ಇಂದು ಸ್ಪಷ್ಟನೆ ನೀಡಿದರು.
ಪಟ್ಟಣದಲ್ಲಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಕ್ಷೇತ್ರದ ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರು ಇತ್ತೀಚೆಗೆ ತಾಲೂಕಿನ ರಂಗಾಪುರ ಕಾವಲಿನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡದ ಉಧ್ಘಾಟನೆಗೆ ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಇಲಾಖೆ ಸಚಿವರಾದ ಎಚ್. ಆಂಜನೇಯರವರು ಆಗಮಿಸಿದ್ದ ಸಂದರ್ಭವನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು ಯಾರೂ ಭಾಗವಹಿಸದಿದ್ದರೂ ಇಂತಹ ನಿರಾಧಾರ ಆರೋಪಗಳನ್ನು ಮಾಡಿರುವುದು ಶಾಸಕರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.
ಯಾರನ್ನೂ ದೂಷಿಸಿಲ್ಲ: ಸಚಿವರನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತ್ಯೇಕವಾಗಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಸ್ವಾಗತಿಸಿ ಬೇಟಿ ಮಾಡುವ ಮೂಲಕ ನಮ್ಮ ಪಕ್ಷದ ಸಂಘಟನೆ ಮತ್ತು ಈ ಕ್ಷೇತ್ರದ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಂಪೂರ್ಣ ಚರ್ಚಿಸಿದ್ದೇವೆಯೇ ಹೊರತು ಯಾರನ್ನೂ ದೋಷಿಸುವ ಕೆಲಸ ಮಾಡಿಲ್ಲ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ರಘು, ಕಾರ್ಯದರ್ಶಿ ಯೂನಸ್, ಪರಿಶಿಷ್ಠ ಜಾತಿ ಮತ್ತು ಪಂಗಡಗಳ ಘಟಕದ ಅಧ್ಯಕ್ಷ ಕೊಂಡೇನಾಳು ಪ್ರಸನ್ನ, ಉಪಾಧ್ಯಕ್ಷ ನಂಜುಂಡ ಬೋವಿ, ಗೀಜಿಹಳ್ಳಿ ಬಾಬು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

