ಹಾಸನ

ಬಸವಾಪಟ್ಟಣದಲ್ಲಿ ವಿಶ್ವ ಏಡ್ಸ್ ದಿನಾಚರಣೆ

Published On :

ರಾಮನಾಥಪುರ: ಇಲ್ಲಿಗೆ ಸಮೀಪದ ಬಸವಾಪಟ್ಟಣದಲ್ಲಿ ವಿಶ್ವ ಏಡ್ಸ್ ದಿನದ ಅಂಗವಾಗಿ ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ರೆಡ್ರಿಬ್ಬನ್ ಕ್ಲಬ್ ಮತ್ತು ಸರ್ಕಾರಿ ಹೆಚ್.ಎಂ.ಎಸ್. ಪದವಿ ಪೂರ್ವ ಕಾಲೇಜು, ಬಸವಾಪಟ್ಟಣ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಸೋಮವಾರ ಏಡ್ಸ್ ಮಾಸಾಚರಣೆಯನ್ನು ಆಚರಿಸಲಾಯಿತು.  
ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಥಾ ಕಾರ್ಯಕ್ರಮವನ್ನು ನಡೆಸಿ ಏಡ್ಸ್ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಮುಖ್ಯ ಬೀದಿಗಳಲ್ಲಿ ಸಾಗಿದರು.  ಬಸವಾಪಟ್ಟಣ ಆರೋಗ್ಯ ಕೇಂದ್ರದ ವೈದ್ಯ ವಿನೋದ್ ಜೈನ್ ಹಾಗೂ ಸಿಬ್ಬಂದಿ ವರ್ಗದವರು ಕಾಲೇಜಿನ ಪ್ರಾಂಶುಪಾಲ ಬಿ.ಎಸ್. ವೀಣಾ ಮತ್ತು ಉಪನ್ಯಾಸಕ ವರ್ಗದವರು ಭಾಗವಹಿಸಿ, ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಅರಿವು ಮೂಡಿಸಿದರು.  ಜಾಥಾದ ನಂತರ ಕಾಲೇಜು ಆವರಣದಲ್ಲಿ ಏಡ್ಸ್ ಅರಿವು ಕಾರ್ಯಕ್ರಮದ ಬಗ್ಗೆ ವಿಚಾರ ವಿನಿಮಯ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ವೀಣಾ ವಹಿಸಿದ್ದರು.  
ಕಾಲೇಜಿನ ಎನ್.ಎಸ್.ಎಸ್. ಯೋಜನಾ ಅನುಷ್ಠಾನಾಧಿಕಾರಿ ಜಗದೀಶ್, ಉಪನ್ಯಾಸಕರಾದ ದೇವರಾಜೇಗೌಡ, ಕಾಳೇಗೌಡ, ತಾಜ್, ಮಹಾಲಕ್ಷ್ಮಿ, ನಾಗೇಶ್, ಮಂಜುನಾಥ್ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.