ಸಮಗ್ರ ನಿರ್ವಹಣಾ ಕ್ರಮ ಅನುಸರಿಸಲು ರೈತರಿಗೆ ಸಲಹೆ
ಕ.ಪ್ರ.ವಾರ್ತೆ ಸಕಲೇಶಪುರ್ಣ ಡಿ.2
ಬೆಳೆ ಉಳಿಸಿಕೊಳ್ಳಲು ಕೀಟನಾಶಕಗಳ ಬಳಕೆಯನ್ನು ಕೊನೆಯ ಅಸ್ತ್ರವಾಗಿ ಬಳಸುವ ಮೂಲಕ ಬೆಳೆ ಸಂರಕ್ಷಣೆ ಜತೆಗೆ ಪರಿಸರ ಮತ್ತು ಜೀವ ಸಂಕುಲದ ಮೇಲಾಗುವ ದುಷ್ಪರಿಣಾಮಗಳನ್ನು ಕಡಿಮೆ ಮಾಡಲು ರೈತರು ಸಮಗ್ರ ನಿರ್ವಹಣಾ ಕ್ರಮಗಳನ್ನು ಅನುಸರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಶಿವರಾಜು ತಿಳಿಸಿದರು.
ಪಟ್ಟಣದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಸುರಕ್ಷಿತ ಕೀಟನಾಶಕಗಳ ಬಳಕೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೀಟನಾಶಕಗಳ ಬಳಕೆ ಕಡಿಮೆ ಮಾಡಿ, ಮಾಗಿ ಉಳುಮೆ, ನಿರೋಧಕ ತಳಿ ಮತ್ತು ಜೈವಿಕ ಕ್ರಮಗಳ ಬಳಕೆ ಮೂಲಕ ಅಧಿಕ ಇಳುವರಿ ಪಡೆಯುವುದು ಅತಿ ಮುಖ್ಯ ಎಂದರು.
ಕಾರ್ಯಕ್ರಮ ಉದ್ಘಾಟಸಿದ ಜಿಪಂ ಸದಸ್ಯೆ ಮಂಜಮ್ಮ ಮಾತನಾಡಿ, ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರೈತರು ಅಭಿವೃದ್ಧಿಗೆ ಪ್ರಯತ್ನಿಸಬೇಕು ಎಂದು ಹೇಳಿದರು. ಕೃಷಿ ಕಾಲೇಜಿನ ಡಾ. ನಾಗರಾಜು ಅವರು ಸುರಕ್ಷಿತ ಕೀಟನಾಶಕಗಳ ಬಳಕೆಯಲ್ಲಿ ರೈತರು ಅನುಸರಿಸಬೇಕಾದ ಮುಂಜಾಗ್ರತೆ ಕ್ರಮಗಳು ಮತ್ತು ವೈಜ್ಞಾನಿಕ ಸಿಂಪರಣೆ ವಿಧಾನಗಳ ಕುರಿತು ಉಪನ್ಯಾಸ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಯೋಗೇಶ್ ಮಾತನಾಡಿ, ವೈಜ್ಞಾನಿಕ ಬೋರ್ಡೋ ದ್ರಾವಣ ತಯಾರಿ ಮತ್ತು ರಸಗೊಬ್ಬರಗಳ ಗುಣಮಟ್ಟ ಪರಿಶೀಲನೆಗೆ ಸರಳ ವಿಧಾನಗಳನ್ನು ತಿಳಿಸಿದರು. ನಂತರ ರೈತರೊಂದಿಗೆ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು.
ತಾಪಂ ಅಧ್ಯಕ್ಷೆ ಮಂಜುಳ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೃಷಿಕ ಸಮಾಜದ ಅಧ್ಯಕ್ಷ ಹೆತ್ತೂರು ದೇವರಾಜು, ನಾರಾಯಣ ಆಳ್ವ, ಲಯನ್ಸ್ ಅಧ್ಯಕ್ಷ ನರೇಶ್, ಕೃಷಿ ಅಧಿಕಾರಿ ಶ್ರೀನಿವಾಸ್, ಕೃಷಿ ಅಧಿಕಾರಿ ಚೆಲುವರಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

