ಆರೋಗ್ಯ ಕಾರ್ಯಕ್ರಮ
ಆಲೂರು: ನೇರವಾಗಿ ಮರಿಗಳಿಗೆ ಜನ್ಮ ನೀಡುವ ಪ್ರಾಣಿಗಳು ತಮ್ಮ ದೇಹದಲ್ಲೇ ಉತ್ಪಾದಿಸುವ ದ್ರವ ರೂಪವೇ ಹಾಲು ಎಂದು ಕೆಎಂಎಫ್ ಸಹಾಯಕ ವ್ಯವಸ್ಥಾಪಕ ಹೆಚ್.ವಿ. ಗೋಪಾಲ್ ತಿಳಿಸಿದರು. ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಪಟ್ಟಣದ ಎನ್ಹೆಚ್ಪಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಹಾಲು ಮತ್ತು ಆರೋಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಾಲಿನ ಉಪಯೋಗಗಳು ವಿಷಯ ಕುರಿತು ವಿವರಿಸುತ್ತಾ ಪೌಷ್ಟಿಕಾಂಶಗಳಿಂದ ಕೂಡಿದ್ದು ಮನುಷ್ಯನ ಆರೋಗ್ಯಕ್ಕೆ ಉತ್ತಮವಾದದು ಎಂದರು. ಹಾಸನ ಹಾಲು ಒಕ್ಕೂಟ 250 ಲೀ. ಹಾಲಿನಿಂದ ಆರಂಭವಾಗಿ ಪ್ರಸ್ತುತ 7 ಲಕ್ಷ ಲೀಟರ್ವರೆಗೆ ಪ್ರಗತಿ ಸಾಧಿಸಿತೆಂದು ಹೇಳಿದರು. ಕಸಾಪ ತಾಲ್ಲೂಕು ಅಧ್ಯಕ್ಷ ಗುಲಾಂಸತ್ತಾರ್ ಮಾತನಾಡಿ, ಹಾಲು ಪವಿತ್ರವಾದುದು ಮಕ್ಕಳ ಬೆಳವಣಿಗೆಗೆ ಬಹಳ ಸಹಕಾರಿಯಾಗಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

