ಹಾಸನ

ತಂಬಾಕು ವಿರೋಧಿ ಪ್ರತಿಜ್ಞಾ ವಿಧಿ ಬೋಧನೆ

Published On :

ಹಾಸನ: ರಾಜ್ಯ ಶಿಕ್ಷಣ ಇಲಾಖೆ ಆದೇಶದನ್ವಯ ಶಾಲಾ ಕಾಲೇಜುಗಳ ಕೋಟಿ ಮಕ್ಕಳಿಂದ ತಂಬಾಕು ವಿರೋಧಿ ಪ್ರತಿಜ್ಞಾ ಕಾರ್ಯಕ್ರಮದಡಿ ನಗರದ ವಾಣಿ ವಿಲಾಸ ಪದವಿ ಪೂರ್ವ ಕಾಲೇಜಿನಲ್ಲಿ ಹಾಗೂ ವಾಣಿ ವಿಲಾಸ ಪ್ರೌಢಶಾಲೆಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ ನಡೆಯಿತು.  ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಿಲ್ಲಾ ಆರೋಗ್ಯ ಮತ್ತು  ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಬೀರ್ ಅಹಮದ್ ಅವರು ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ. ಶಿವಣ್ಣ ಅವರು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಂಬಾಕು ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಅರಣ್ಯಾಧಿಕಾರಿಗೆ ಬೀಳ್ಕೊಡುಗೆ
ಹಾಸನ: ಉಪವಲಯ ಅರಣ್ಯಾಧಿಕಾರಿ ರಾಮೇಗೌಡ ಅವರು ಇತ್ತೀಚೆಗೆ ನಿವೃತ್ತಿ  ಹೊಂದಿದ್ದರು. ಈ ಸಂಬಂಧ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಹಾಸನ ವಿಭಾಗದ ಅರಣ್ಯ ರಕ್ಷಕ ಸಂಘದ ಅಧ್ಯಕ್ಷರಾಗಿ ಹಾಗೂ ಹಾಲಿ ಹಾಸನ  ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಬೈಕ್ನಿಂದ ಬಿದ್ದು ವ್ಯಕ್ತಿ ಸಾವು
ಹಾಸನ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬೈಕ್ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ  ಮೃತಪಟ್ಟ ಘಟನೆ ಇತ್ತೀಚೆಗೆ  ನಡೆದಿದೆ. ತಾಲೂಕಿನ ದುದ್ದ ಹೋಬಳಿಯ ಕುದುರು ಗುಂಡಿ ಗ್ರಾಮದ ಶ್ರೀನಿವಾಸ (35) ಎಂಬವರೇ ಮೃತಪಟ್ಟ ದುರ್ದೈವಿ.
ಶ್ರೀನಿವಾಸ ಬೈಕಿನಲ್ಲಿ ಕುಂದೂರುಮಠಕ್ಕೆ ಗ್ರಾಮದವರ ಬೀಗರ ಔತಣಕ್ಕೆ ಬಂದು ವಾಪಸ್ ಊರಿಗೆ ಹೋಗುತ್ತಿದ್ದಾಗ, ಚನ್ನರಾಯಪಟ್ಟಣ ತಾ. ದಂಡಿಗನಹಳ್ಳಿ ಹೋಬಳಿ, ಕುಂದೂರುಮಠ-  ಹೆರಗು ರಸ್ತೆಯ ಯರೆಬಾರೆ ಕಾವಲು ಹತ್ತಿರ ಎದುರುಗಡೆಯಿಂದ  ಬಂದ ಮತ್ತೊಂದು ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದಾರೆ. ಈ ಸಂದರ್ಭದಲ್ಲಿ, ನಿಯಂತ್ರಣ ತಪ್ಪಿದ ಶ್ರೀನಿವಾಸ್ ಅವರಿದ್ದ ಬೈಕ್  ರಸ್ತೆಬದಿಗೆ ರಭಸದಿಂದ ಬಿದ್ದಿದೆ. ಈ ಸಂದರ್ಭದಲ್ಲಿ, ಶ್ರೀನಿವಾಸ್ (35) ಅವರಿಗೆ ತೀವ್ರ ಪೆಟ್ಟಾಗಿದೆ. ಚಿಕಿತ್ಸೆಗಾಗಿ ಅವರನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಲ್ಲಿ ಚಿಕಿತ್ಸೆ  ಫಲಕಾರಿಯಾಗದೆ ಶ್ರೀನಿವಾಸ್ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.