ಗೋಮಾಳ ಒತ್ತುವರಿ: ನಾಳೆ ಬೃಹತ್ ಪ್ರತಿಭಟನೆ
ಕ.ಪ್ರ.ವಾರ್ತೆ ಹಾಸನ ಡಿ. 3
ಗ್ರಾಮದ ಗೋಮಾಳವನ್ನು ಖಾಸಗಿಯವರು ಒತ್ತುವರಿ ಮಾಡಿದ್ದು, ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ಡಿ. 5ರಂದು 12 ಗ್ರಾಮಗಳ ಗ್ರಾಮಸ್ಥರು ಜಾನುವಾರುಗಳೊಂದಿಗೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ದೊಡ್ಡಬಸವನಹಳ್ಳಿ ಗ್ರಾಮಸ್ಥರು ತಿಳಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ಜಾನಕೆರೆ ಹೇಮಂತ್, ತಾಲೂಕಿನ ದೊಡ್ಡಬಸವನಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂ.105ರಲ್ಲಿ 54.34 ಎಕರೆ ಜಾಗದಲ್ಲಿ ಕೆಐಎಡಿಬಿ 49.26 ಎಕರೆ ಭೂಮಿಯನ್ನು ನಾನಾ ಉದ್ದೇಶಗಳಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ. 1.8 ಎಕರೆ ಜಾಗ ಆ ಸ್ಥಳದಲ್ಲಿರುವ ಪುರಾತನ ರಂಗನಾಥಸ್ವಾಮಿ ದೇವಾಯಕ್ಕೆ ಸೇರಿದ್ದಾಗಿದೆ ಎಂದರು.
ಪವನ ಪುತ್ರ ರೆಸಾರ್ಟ್ನವರು ಉಳಿದ 12.29 ಎಕರೆ ಗೋಮಾಳ ಜಾಗವನ್ನು ಸುಳ್ಳು ದಾಖಲೆ ಸೃಷ್ಟಿಸಿಕೊಂಡು ಒತ್ತುವರಿ ಮಾಡಿ ರೆಸಾರ್ಟ್ ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ಜಾನುವಾರುಗಳನ್ನು ಮೇಯಿಸಲು ಜಾಗವಿಲ್ಲದೆ ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾವಾಗಿದೆ. ವಿಶಾಲವಾದ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗ್ರಾಮಸ್ಥರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರಿದರು.
ಒತ್ತುವರಿ ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುದ್ದರೂ, ಈವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತಾಲೂಕು ಕಚೇರಿಯಲ್ಲಿ ಭೂಮಿಯ ಪಹಣಿ ಪಡೆದಾಗ ಗೋಮಾಳದ ಹೆಸರಿನಲ್ಲಿ 12.29 ಎಕರೆ ಜಾಗ ಇರುವುದಾಗಿ ತಿಳಿದು ಬಂದಿದ್ದು, ಕೆಐಎಡಿಬಿ ಯ ಕೆಲವು ಅಧಿಕಾರಿಗಳು ರೆಸಾರ್ ಮಾಲೀಕರೊಂದಿಗೆ ಶಾಮೀಲಾಗಿ ಭೂಮಾಫಿಯ ನಡೆಸುತ್ತಿದ್ದಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದರು.
ಆದ್ದರಿಂದ ಕೂಡಲೇ ಭೂಮಿಯನ್ನು ಗ್ರಾಮಕ್ಕೆ ವಾಪಸ್ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಡಿ. 5ರಂದು ದೊಡ್ಡಬಸವನಹಳ್ಳಿ ಸುತ್ತಮುತ್ತಲ 12 ಹಳ್ಳಿಗಳ ಗ್ರಾಮಸ್ಥರು ದನಕರುಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ರಂಗನಾಥಸ್ವಾಮಿ ಟ್ರಸ್ಟ್ನ ಅಧ್ಯಕ್ಷ ಮಧುಚಂದ್ರ, ಬಸವನಹಳ್ಳಿ ಗ್ರಾಮಸ್ಥರಾದ ಬಾಬು, ಧರ್ಮಶೇಖರ್, ಶ್ರೀರಾಮಸೇನೆ ಉಪಾಧ್ಯಕ್ಷ ಕುಮಾರ್ ಸೌದ್ರಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

