ಹಾಸನ

ಭ್ರೂಣಲಿಂಗ ಪತ್ತೆ ನಿಷೇಧ ಕುರಿತು ಕಾರ್ಯಾಗಾರ

Published On :

ಹಾಸನ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯ್ತಿ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಾಸನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ, ಹಾಸನ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಹಾಸನ ಇವರ ಸಂಯುಕ್ತ ಆಶ್ರಯದಲ್ಲಿ ಡಿ. 6ರಂದು ಬೆಳಗ್ಗೆ 9.30ಕ್ಕೆ ನಗರದ ಡಾ. ಅಂಬೇಡ್ಕರ್ ಭವನದಲ್ಲಿ  ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ ಕಾಯಿದೆಯ ಜಿಲ್ಲಾ ಮಟ್ಟದ ಕಾರ್ಯಾಗಾರ ಏರ್ಪಡಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ.ಎಸ್. ಸೋಮಶೇಖರ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಅಂಬಿಕಾ ರಾಮಣ್ಣ ದ ಅಧ್ಯಕ್ಷತೆ ವಹಿಸುವರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಮುಸ್ತಫಾ ಹುಸೇನ್, ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಉಪೇಂದ್ರ ಪ್ರತಾಪ್ಸಿಂಗ್, ಜಿಲ್ಲಾ ಎಸ್ಪಿ ರವಿ ಚನ್ನಣ್ಣನವರ್, ಯೋಜನಾ ನಿರ್ದೇಶಕ  ಡಾ.ಎಚ್.ಸಿ.ರಮೇಶ್ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ನಿವೇಶನ ಹಂಚಿಕೆ ಕುರಿತು ಸಭೆ
ಹಾಸನ: ಕೃಷ್ಣಾ ನಗರ ಬಡಾವಣೆ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಸಭೆ ನಡೆಸಿದರು. ಅಪರ ಜಿಲ್ಲಾಧಿಕಾರಿ ಡಾ. ಗೋಪಾಲಕೃಷ್ಣ, ಉಪವಿಭಾಗಾಧಿಕಾರಿ ಶರತ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರಾಮಚಂದ್ರ, ಹುಡಾ ಆಯುಕ್ತ ಕೆ.ಎಂ.ರಮೇಶ್ ಇತರರು ಉಪಸ್ಥಿತರಿದ್ದರು.
ಬೆಂಬಲ ಬೆಲೆಯಲ್ಲಿ ಮೆಕ್ಕೆ ಜೋಳ ಖರೀದಿ
ಹಾಸನ: ಕೃಷಿ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತ ಹಾಗೂ ಟಿಎಪಿಸಿಎಂಎಸ್ ಹಾಸನ ಇವರ ಸಹಯೋಗದೊಂದಿಗೆ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಡಿಸೆಂಬರ್ 1ರಿಂದ ತೆರೆಯಲಾಗಿದೆ. ಹಾಸನ ಆಲೂರು ತಾಲೂಕಿನ ರೈತರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು  ಮಾರುಕಟ್ಟೆ ಸಮಿತಿ ಅಧ್ಯಕ್ಷರು ಕೋರಿದ್ದಾರೆ.
ಸರ್ಕಾರಿ ನೌಕರರ ಕ್ರೀಡಾಕೂಟ
ಹಾಸನ: ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಡಿ. 14ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ವಿವರಗಳಿಗಾಗಿ ಜಿಲ್ಲಾ ಸಂಘದ ಕ್ರೀಡಾ ಕಾರ್ಯದರ್ಶಿ ವಿ. ಸತೀಶ್ ಮೊ. 9844159498 ಮತ್ತು ಕೆ. ಪ್ರಕಾಶ್ ಮೊ. 9739384637 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.