ಒಳಚರಂಡಿ ಅಭಿವೃದ್ಧಿ ಕಾಮಗಾರಿಗೆ ಹಣ ಬಿಡುಗಡೆ: ಸಚಿವ ಆಂಜನೇಯ
ಕನ್ನಡಪ್ರಭ ವಾರ್ತೆ ಹಾಸನ ಡಿ. 4
ಪರಿಶಿಷ್ಟ ಜಾತಿ ಉಪ ಯೋಜನೆಯ ಕ್ರೋಢೀಕೃತ ಅನುದಾನದಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಿಗೆ ಸಿ.ಸಿ. ರಸ್ತೆ ಮತ್ತು ಒಳಚರಂಡಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಕೈಗೆತ್ತಿಕೊಳ್ಳಲು ಹಾಸನ ಜಿಲ್ಲೆಯ ಒಟ್ಟು 07 ವಿಧಾನಸಭಾ ಕ್ಷೇತ್ರಗಳಿಗೆ 6.12 ಕೋಟಿ ರು. ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾಧಿಕಾರಿ ಕಚೇರಿಗೆ ಬಿಡುಗಡೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದರು.
ಜಿಲ್ಲೆಯಲ್ಲಿ 2012-13 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾಲೋನಿಗಳಿಗೆ ಸಿ. ಸಿ. ರಸ್ತೆ ಮತ್ತು ಒಳಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಅವಶ್ಯಕ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ವಿಧಾನಸಭಾ ಸದಸ್ಯ ಎಚ್.ಡಿ.ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಸಿ.ಎನ್.ಬಾಲಕೃಷ್ಣ ಅವರು ನಿಯಮ 73 ರ ಮೇರೆಗೆ ಪ್ರಸ್ತಾಪಿಸಿರುವ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು.
ಅನುದಾನದಲ್ಲಿ ಪ್ರಮುಖವಾಗಿ ಸಿ.ಸಿ. ರಸ್ತೆ ಮತ್ತು ಒಳಚರಂಡಿ ನಿರ್ಮಾಣ ಮಾಡಲು ಒಟ್ಟು 75 ಕಾಮಗಾರಿಗಳನ್ನು ಆಯ್ಕೆ ಮಾಡಿ, ಕಾಮಗಾರಿಗಳನ್ನು ಕಾರ್ಯಗತಗೊಳಿಸಲು ಪಿಡಬ್ಲ್ಯೂಡಿ, ಪಂಚಾಯತ್ರಾಜ್ ಎಂಜಿನಿಯರ್ ಅವರಿಂದ ಡಿವಿಷನ್, ಕೆ.ಆರ್.ಐ.ಡಿ.ಎಲ್ ಏಜೆನ್ಸಿಗಳಿಗೆ ವಹಿಸಿ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜಿಲ್ಲೆಯ ವಿಧಾನಸಭಾ ಕ್ಷೇತ್ರಾವಾರು 2012-13 ನೇ ಸಾಲಿನಲ್ಲಿ ಬಿಡುಗಡೆ ಮಾಡಿದ ಒಟ್ಟು 73 ಕಾಮಗಾರಿಗಳ ಪೈಕಿ 27 ಕಾಮಗಾರಿಗಳು ಪೂರ್ಣಗೊಂಡಿದ್ದು, 267.80 ಲಕ್ಷ ರು. ಅನುದಾನ ವೆಚ್ಚ ಮಾಡಲಾಗಿದೆ. ಉಳಿದ 46 ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ವಿವರಿಸಿದರು.
ಇದಲ್ಲದೇ 2012-13 ನೇ ಸಾಲಿನಲ್ಲಿ ಚುನಾಯಿತ ಪ್ರತಿನಿಧಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು ನೀಡಿರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಪರಿಶಿಷ್ಟ ಜಾತಿ ಕಾಲೋನಿ ಅಭಿವೃದ್ಧಿಗಾಗಿ ಹೆಚ್ಚುವರಿಯಾಗಿ 43 ಗ್ರಾಮಗಳಲ್ಲಿ ಕಾಂಕ್ರೀಟ್ರಸ್ತೆ ಕಾಮಗಾರಿ ಕೈಗೊಳ್ಳಲು 2.70 ಕೋಟಿ ರು. ಮಂಜೂರು ಮಾಡಲಾಗಿದೆ.
ಈ ಕಾಮಗಾರಿಗಳಿಗೆ ಪ್ರಸಕ್ತ ಸಾಲಿನಲ್ಲಿ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗಿದೆ ಎಂದೂ ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

