ಪೊಲೀಸ್ ಸರ್ಕಲ್
ಜೂಜಾಟ: 7 ಜನರ ಬಂಧನ
ಹಾಸನ, ಡಿ. 5: ಅಕ್ರಮವಾಗಿ ಜೂಜಾಡುತ್ತಿದ್ದ ಏಳು ಮಂದಿಯನ್ನು ಬಂಧಿಸಿ, ಪಣಕ್ಕಿಟ್ಟಿದ್ದ ರು. 4,580ಗಳನ್ನು ವಶಪಡಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ತಾಲ್ಲೂಕಿನ ಹನುಮಂತಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಗುಲಿಯ ಮೇಲೆ ಅಂದರ್ ಬಾಹರ್ ಜೂಜಾಡುತ್ತಿದ್ದಾಗ ಪ್ರೊಬೇಷನರಿ ಜಿಲ್ಲಾಧಿಕಾರಿ ರಾಮಚಂದ್ರನ್ರವರು ತಿಳಿಸಿದ ಮಾಹಿತಿ ಮೇರೆಗೆ ಪಿಎಸ್ಐ ಪ್ರಮೋದ್ ಕುಮಾರ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಣ್ಣಪ್ಪ (35), ರಮೇಶ್ (37), ದೀಪು (27), ಸಂತೋಷ (27), ದಿನೇಶ್ (30), ಸುದರ್ಶನ (27) ಮತ್ತು ರವಿ (41) ಎಂಬವರನ್ನು ಬಂಧಿಸಿದ್ದು, ಜೂಜಾಟದಲ್ಲಿ ಪಣಕ್ಕಿಟ್ಟದ್ದ ಸುಮಾರು 4580 ರು. ನಗದನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿದ್ದಾರೆ.
22 ಗ್ಯಾಸ್ ಸಿಲಿಂಡರ್ ವಶ
ಹಾಸನ: ಅಕ್ರಮವಾಗಿ ಗ್ಯಾಸ್ ರೀಫಿಲ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಗುರುವಾರ ನಡೆದಿದೆ. ನಗರದ ಶಾಂತಿನಗರ ವಾಸಿ ಸುಬ್ರಹ್ಮಣ್ಯ (50) ರವರ ಮನೆಯ ಕಾರ್ ಶೆಟ್ನಲ್ಲಿ ಹಣ ಸಂಪಾದನೆಗಾಗಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಗ್ಯಾಸ್ ಫಿಲ್ಲಿಂಗ್ ಮಾಡುತ್ತಿದ್ದಾಗ ಪಿ ಎಸ್ ಐ ಎಂ. ಮೋಹನ್ ಕುಮಾರ್ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಸುಬ್ರಹ್ಮಣ್ಯ ಅವರನ್ನು ಬಂಧಿಸಿದ್ದು, ಸುಮಾರು 22 ಭಾರತ್ ಮತ್ತು ಹೆಚ್ಪಿ ಗ್ಯಾಸ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಟ್ಕಾ ಜೂಜಾಟ
ಹಾಸನ: ಮಟ್ಕಾ ಜಾಜೂಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ರು. 2,400 ವಶಪಡಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ನಗರದ ಕಟ್ಟಿನಕೆರೆ ಮಾರ್ಕೆಟ್ ಹತ್ತಿರ ಮೋಸದಿಂದ ಮಟ್ಕಾ ಜೂಜಾಡುತ್ತಿದ್ದಾಗ ಪಿಎಸ್ಐ ಕೃಷ್ಣಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಮಹೇಶ (23) ಎಂಬಾತನನ್ನು ಬಂಧಿಸಿದ್ದಾರೆ. ರು. 2,400 ನಗದನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
3 ಜನ ವಿಗ್ರಹಗಳ್ಳರ ಬಂಧನ
ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ಮೂವರು ವಿಗ್ರಹಕಳ್ಳನ್ನು ಬಂಧಿಸಿರುವ ಘಟನೆ ಮಂಗಳವಾರ ನಡೆದಿದೆ. ಬೇಲೂರಿನ ಹಳೇಬೀಡು ಠಾಣೆಯ ಪಿಎಸ್ಐ ಕೆ.ಎಂ. ಮಂಜು ಪುಪ್ಪಗಿರಿ ಜಾತ್ರೆ ಪ್ರಯುಕ್ತ ಸಿಬ್ಬಂದಿಗಳೊಂದಿಗೆ ಇಲಾಖಾ ಜೀಪ್ ಣನಲ್ಲಿ ಗಸ್ತಿನಲ್ಲಿದ್ದಾಗ ಕೆಂಪಗೊಂಡನಹಳ್ಳಿ ಬಸ್ ನಿಲ್ದಾಣದ ಹತ್ತಿರ ಮುಸ್ತಾಫ್ (37), ಬಸೀರ್ (29), ಮಹಮದ್ (54) ಎಂಬವರನ್ನು ಬಂಧಿಸಿದ್ದು, ಮಾರಾಟ ಮಾಡಲು ಪ್ಲಾಸ್ಟಿಕಕ್ಚೀಲದಲ್ಲಿಕೊಂಡಿದ್ದ ಸುಮಾರು 2.1ಣ2 ಅಡಿ ಉದ್ದದ ಬಳಪಿನ ಕಲ್ಲಿನ ದೇವರ ವಿಗ್ರಹವನ್ನು ವಶಪಡಿಕೊಂಡಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

