ಹಾಸನ

ಮಳೆಯಿಂದ ಕಾಫಿಗೆ ಪ್ರತಿಕೂಲ ಪರಿಣಾಮ

Published On :

ಹಾಸನ: ಜಿಲ್ಲೆಯ ಕಾಫಿ ಬೆಳೆಯುವ ಮಲೆನಾಡಿನ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಅಕಾಲಿಕ ಮಳೆಯಿಂದ ಕಾಫಿ ಫಸಲಿನ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಹಾಸನ ಜಿಲ್ಲಾ ಬೆಳೆಗಾರರ ಸಂಘ ತಿಳಿಸಿದೆ. ಈಗಾಲೇ ಅರೇಬಿಕಾ ಕಾಫಿ ಕಟಾವಿನ ಕಾರ್ಯ ಪ್ರಾರಂಭವಾಗಿದ್ದು, ಗಿಡದಲ್ಲಿದ್ದ ಕಾಫಿಯು ನೆಲಕ್ಕುದುರಿದೆ. ಬಿದ್ದ ಕಾಫಿಯನ್ನು ಕಾರ್ಮಿಕರ ಕೊರತೆಯಿಂದ ಹೆರಕಲು ಸಾಧ್ಯವಾಗುತ್ತಿಲ್ಲ. ಇದರಿಂದ ಬೆರ್ರಿ ಬೋರರ್ ರೋಗ ಉಲ್ಬಣಗೊಳ್ಳುವ ಸಾಧ್ಯತೆಯಿದೆ ಎಂದು  ಅಧ್ಯಕ್ಷ ಮುಜಾಹಿದ್ ಆಲಂ ಹಾಗೂ ಕಾರ್ಯದರ್ಶಿ ಸಿ.ಎಸ್. ಮಹೇಶ್ ಆತಂಕ ವ್ಯಕ್ತಪಡಿಸಿದ್ದಾರೆ. ಕಟಾವು ಮಾಡಿದ ಕಾಫಿಯನ್ನು ಒಣಗಿಸಲು ಸಾಧ್ಯವಾಗುತ್ತಿಲ್ಲ. ಈ ವರ್ಷದಲ್ಲಿ ಮೇ ತಿಂಗಳಿಂದ ಆಗಸ್ಟ್ ತಿಂಗಳವರೆಗೆ ಎಡ ಬಿಡದೆ ಸುರಿದ ಮಳೆಯಿಂದ ಶೇ.50 ರಷ್ಟು ಕಾಫಿ ಫಸಲು ನಾಶವಾಗಿತ್ತು. ಇದರ ಜೊತೆಗೆ ಈಗ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಶೇ.20 ರಷ್ಟು ಕಾಫಿಯು ನಾಶವಾಗಿದೆ. ಈ ಅಕಾಲಿಕ ಮಳೆಯಿಂದ ಮುಂದಿನ ಸಾಲಿನ ಕಾಫಿ ಫಸಲಿನಲ್ಲೂ ನಷ್ಟ ಸಂಭವಿಸಲಿದೆ ಎಂದು ಹೇಳಿದ್ದಾರೆ.
ನಾನಾ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ: ಸ್ಟಾಫ್ ಸೆಲೆಕ್ಷನ್ ಕಮೀಷನ್, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಂ್ಡಟಡ್ಝಿ ಖಿಛಡ್ಞ್ಝಟ್ಜಿ ಖಡಿಛಜಿಜಿ)  ನಾನ್ ಟೆಕ್ನಿಕಲ್ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ ಪಾಸಾಗಿದ್ದು, 18ರಿಂದ 25 ವರ್ಷದೊಳಗಿರಬೇಕು. (ಪರಿಶಿಷ್ಟ ಜಾತಿ, ಪಂಗಡ, ಓಬಿಸಿ, ಅಂಗವಿಕಲ ಅಭ್ಯರ್ಥಿಗಳಿಗೆ ವಯೋವುತಿಯಲ್ಲಿ ನಿಯಮಾನುಸಾರ ರಿಯಾಯಿತಿ ಇರುತ್ತದೆ. ಅರ್ಜಿ ಸಲ್ಲಿಸಲು ಡಿ. 13 ಕಡೇ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಡಿಡಿಠ// ಡಡ್ಛ್ಞ್ಞ್ಠ.್ಞಛ್ಠ.ಟ್ಝ್ಛಿ.್ಝಟಿ ಅಥಝಾಡಿಡಿಠ ///ಡಡ್ಛ.ಟ್ಝ್ಛಿ.್ಝಟಿನಲ್ಲಿ ಲಭ್ಯವಿರುವ ಮಾಹಿತಿಯನ್ನು ಪಡೆಯುವುದು.  ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ  ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇಲಾಖೆಯ ಮಹತ್ವಾ ಕಾಂಕ್ಷಿ ಕಾರ್ಯಕ್ರಮವಾದ ಸ್ಟಡಿ ಸರ್ಕಲ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪರೀಕ್ಷಾ ಪೂರ್ವ ತರಬೇತಿ ಶಿಬಿರದಲ್ಲಿ ಅನುಭವಿ ನುರಿತ  ಸಂಪನ್ಮೂಲ ಉಪನ್ಯಾಸಕರಿಂದ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ.   ತರಬೇತಿ ಶಿಬಿರದ ಸದುಪಯೋಗವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಡಿ.16 ರಿಂದ ಡಿ. 31ರವರೆಗೆ ನಡೆಯುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಹೆಚ್ಚಿನ ಅನುಭವ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ  ಉದ್ಯೋಗ ವಿನಿಮಯ ಕಚೇರಿ ಹಾಸನ. ದೂ: 08172-268374 ಅನ್ನು ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.