2877 ಕೊಳವೆಬಾವಿಗೆ ಸ್ಥಳ ಆಯ್ಕೆ
ಕನ್ನಡಪ್ರಭ ವಾರ್ತೆ ಟಿ ಹಾಸನ ಟಿ ಡಿ.6
ರಾಜ್ಯದ ಅಂತರ್ಜಲ ಮೌಲೀಕರಣವನ್ನು 2009ರ ಅಂತ್ಯಕ್ಕೆ ಕೇಂದ್ರೀಯ ಅಂತರ್ಜಲ ಮಂಡಳಿಯ ಸಹಯೋಗದೊಂದಿಗೆ ವರದಿ ತಯಾರಿಸಿ ರಾಜ್ಯದ 176 ತಾಲೂಕುಗಳನ್ನು ಕ್ಲಿಷ್ಟಕರ, ಅರೆ ಕ್ಲಿಷ್ಟಕರ, ಸುರಕ್ಷಿತ ಮತ್ತು ಮಿಶ್ರಿತ ವರ್ಗವೆಂದು ವರ್ಗೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜಿಲ್ಲಾ ಅಂತರ್ಜಲ ಕಾರ್ಯಾಲಯಗಳ ಮೂಲಕ ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಶ್ರವಣಬೆಳಗೊಳ ವಿಧಾನಸಭಾ ಸದಸ್ಯ ಸಿ.ಎನ್. ಬಾಲಕೃಷ್ಣ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಯವರು ಈ ರೀತಿ ಉತ್ತರಿಸಿದರು. ಸಾರ್ವಜನಿಕರಿಗೆ ಮತ್ತು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಕೊಳವೆ ಬಾವಿ ಸ್ಥಳ ಆಯ್ಕೆಯನ್ನು ಭೂ ವೈಜ್ಞಾನಿಕ ಮತ್ತು ಭೂ ಭೌತ ವಿಧಾನದ ಮೂಲಕ ತಾಂತ್ರಿಕ ಸಲಹೆ ನೀಡಲಾಗುತ್ತಿದೆ. 2013-14ನೇ ಸಾಲಿನಲ್ಲಿ 2877 ತಾಂತ್ರಿಕ ಸಲಹೆ ನೀಡಿ ಕೊಳವೆ ಬಾವಿ ಸ್ಥಳ ಆಯ್ಕೆ ನೀಡಲಾಗಿದೆ. ಇಲಾಖೆಯ ಒಟ್ಟು 1826 ಅಧ್ಯಯನ ಬಾವಿ, ಕೊಳವೆ ಬಾವಿಗಳಲ್ಲಿ ಪ್ರತಿ ತಿಂಗಳು ಜಲಮಟ್ಟ ಮಾಪನ ಮಾಡಲಾಗುವುದು ಎಂದರು. ಮುಂಗಾರು ಮತ್ತು ಹಿಂಗಾರಿನಲ್ಲಿ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಿಸಿ ಗುಣಮಟ್ಟದ ವರದಿಯನ್ನು ತಯಾರಿಸುವುದು. ಅಂತರ್ಜಲ ಅಭಿವೃದ್ಧಿಗಾಗಿ, ಅಂತರ್ಜಲ ಕೃತಕ ಮರು ಪೂರೈಕೆ ರಚನೆಯಾದ ಚೆಕ್ ಡ್ಯಾಂಗಳನ್ನು ಇಲಾಖೆ ವತಿಯಿಂದ ಆಯ್ಕೆ ಮಾಡಿದ ಸ್ಥಳಗಳಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ 2013-14 ನೇ ಸಾಲಿನಲ್ಲಿ ರು. 74.96 ಲಕ್ಷ ಅನುದಾನ ಮಂಜೂರು ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಭಾಗ್ಯಲಕ್ಷ್ಮಿ ಸೌಲಭ್ಯ: ಸರ್ಕಾರದ ಆದೇಶಂತೆ ರು. 10,000 ಬದಲಿಗೆ 1ನೇ ಹೆಣ್ಣು ಮಗುವಿನ ಹೆಸರಿನಲ್ಲಿ ರು. 19,300 ಹಾಗೂ ಎರಡನೇ ಹೆಣ್ಣು ಮಗುವಿನ ಹೆಸರಿನಲ್ಲಿ ರು. 18,350 ಠೇವಣಿ ಹೂಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅನ್ವಯವಾಗುವ ಸರ್ಕಾರಿ ಆದೇಶವನ್ನು ಪರಿಷ್ಕರಿಸಲಾಗಿದೆಯೇ ಎಂಬ ಬಗ್ಗೆ ಶ್ರವಣಬೆಳಗೊಳ ವಿಧಾನಸಭಾ ಸದಸ್ಯ ಸಿ.ಎನ್. ಬಾಲಕೃಷ್ಣ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿ, 2011-12ನೇ ಸಾಲಿನಲ್ಲಿ 1-4-2011ರಿಂದ ಜನಿಸಿದ ಹೆಣ್ಣು ಮಕ್ಕಳನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲು ಬಿಪಿಎಲ್ ಕಾರ್ಡನ್ನು ಕಡ್ಡಾಯಗೊಳಿಸಲಾಗಿದೆ ಹಾಗೂ 2011-12 ರಲ್ಲಿ 2,54,463, 2012-13ರಲ್ಲಿ 3,99,823 ಮತ್ತು 2013-14 ರಲ್ಲಿ 1,00,416 ಒಟ್ಟು 7,54,702 ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆಯಡಿ ಸೌಲಭ್ಯವನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

