ಹಾಸನ

ಬೆಂಬೆಲೆ ಏನಕ್ಕೂ ಸಾಲದು

Published On :

ಕ.ಪ್ರ. ವಾರ್ತೆ ಟಿ ಹೊಳೆನರಸೀಪುರ ಟಿ ಡಿ 7
ಸರ್ಕಾರವು ರಾಗಿ ಹಾಗೂ ಬತ್ತಕ್ಕೆ ನಿಗದಿಗೊಳಿಸಿರುವ ಬೆಂಬಲ ಬೆಲೆಯು ಯಾವುದಕ್ಕೂ ಸಾಲದಾಗಿದ್ದು, ರೈತರಿಂದ ಖರೀದಿಸುವ ಬೆಳೆಗೆ ನಿಗದಿಗೊಳಿಸಿರುವ ಬೆಂಬಲ ಬೆಲೆಯನ್ನು ವೈಜ್ಞಾನಿಕವಾಗಿ ಹೆಚ್ಚಿಸುವಂತೆ ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದಲ್ಲಿನ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಖರೀದಿ ಕೇಂದ್ರವನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರವು ನಿಗದಿಗೊಳಿಸಿರುವ ಬೆಂಬಲ ಬೆಲೆಯು ರೈತನು ಕೈಗೊಂಡಿರುವ ಕೃಷಿಗೆ ಯಾವುದೇ ಮೂಲದಿಂದಲೂ ಸಾಲದಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಬೆಳೆಗಳಿಗೆ ಉತ್ತಮ ಬೆಲೆಯನ್ನು ನೀಡುವ ಅಗತ್ಯ ಇದೆ ಎಂದರು.
ಸರ್ಕಾರವು ಜೋಳಕ್ಕೆ 1310ನ್ನು ನಿಗದಿಗೊಳಿಸಿದ್ದು, ಇದನ್ನು ಕನಿಷ್ಠ 1500ಗಳಿಗೂ, ರಾಗಿಗೆ ನಿಗದಿಗೊಳಿಸಿರುವ 1800 ಹಾಗೂ ಬತ್ತಕ್ಕೆ ನಿಗದಿಗೊಳಿಸಿರುವ 1600ನ್ನು ಕನಿಷ್ಠ 2000ಕ್ಕೆ ಏರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಶಾಸಕ ಎಚ್.ಡಿ.ರೇವಣ್ಣ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಾವೇ ಮುಂದೆ ನಿಂತು ರೈತರ ಬೆಳೆಗಳಿಗೆ ಉತ್ತಮ ಬೆಲೆ ನಿಗದಿಗೊಳಿಸಿದಲ್ಲಿ ರೈತರ ಸಂಕಷ್ಟಗಳಿಗೆ ಪರಿಹಾರ ಸಿಗಬಹುದಾಗಿದೆ ಎಂದರು.
ಸರ್ಕಾರದ ವತಿಯಿಂದ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಉದಯಪುರ, ದುದ್ದ ಹಾಗೂ ಶಾಂತಿಗ್ರಾಮದಲ್ಲಿ ಖರೀದಿ ಕೇಂದ್ರ ಸ್ಥಾಪಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ಎಪಿಎಂಸಿ ಆವರಣದಲ್ಲಿ ರೈತರು ಬೆಳೆದ ಬೆಳೆಗಳನ್ನು ಸೂಕ್ತವಾಗಿ ದಾಸ್ತಾನು ಮಾಡಲು ಅನುಕೂಲಗಳನ್ನು ಕಲ್ಪಿಸಿ ಗೋಡೌನ್ಗಳನ್ನು ಒದಗಿಸಿಕೊಡುವಂತೆ ಎಪಿಎಂಸಿ ಕಾರ್ಯದರ್ಶಿಗೆ ನಿರ್ದೇಶಿಸಿದ ಶಾಸಕರು, ಇದೇ ಸಂದರ್ಭದಲ್ಲಿ ಹಳ್ಳಿಮೈಸೂರು ಹೋಬಳಿಯೂ ಸೇರಿದಂತೆ ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರರಿಗೆ ಸೂಚಿಸಿದರು.
ಎಪಿಎಂಸಿ ಅಧ್ಯಕ್ಷ ಎಚ್.ಎಸ್.ಸುದರ್ಶನ್, ತಹಸೀಲ್ದಾರ್ ಆರ್.ಬಿ.ಶಿವಶಂಕರಪ್ಪ, ಎಪಿಎಂಸಿ ಕಾರ್ಯದರ್ಶಿ ಮಹೇಶ್, ಸಹಾಯಕ ಕೃಷಿ ನಿರ್ದೇಶಕ ಡಾ. ಯು.ಎಚ್.ಭಾನುಪ್ರಕಾಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.