ಹಾಸನ

ವೈದ್ಯರಿಗೆ ನಿರಂತರ ಅಭ್ಯಾಸ ಅಗತ್ಯ: ಡಿಎಚ್ಒ

Published On :

ಕ.ಪ್ರ. ವಾರ್ತೆ ಟಿ ಹೊಳೆನರಸೀಪುರ ಟಿ ಡಿ 7
ವೈದ್ಯಕೀಯ ರಂಗ ಇತ್ತೀಚಿನ ವರ್ಷಗಳಲ್ಲಿ ಅಗಾಧವಾಗಿ ಬೆಳೆಯುತ್ತಿದ್ದು ವೈದ್ಯರು ನಿರಂತರವಾಗಿ ಅಭ್ಯಸಿಸದೆ ಹೋದಲ್ಲಿ ರೋಗವನ್ನು ನಿಖರವಾಗಿ ಗುರುತಿಸಲು ಸಾಧ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಶ್ಯಾಮಲದೇವಿ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಇತ್ತೀಚೆಗೆ ಭಾರತೀಯ ವೈದ್ಯಕೀಯ ಸಂಘ ಆಯೋಜಿಸಿದ್ದ ಸಿಎಂಸಿ ಕಾರ್ಯಾಗಾರದಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ಇದ್ದ ವೈದ್ಯಕೀಯ ಪದ್ಧತಿಯಲ್ಲಿ ನಡೆದುಕೊಂಡು ಬರುತ್ತಿದ್ದ ಅಂಶಗಳು ಇತ್ತೀಚೆಗೆ ಮಾಯವಾಗಿದೆ. ವೈದ್ಯರು ದಿನನಿತ್ಯ ತಮ್ಮ ಸೇವೆ ಜತೆಗೆ ಸಮಾಜದಲ್ಲಿ ಹೊಸದಾಗಿ ಅವಿಷ್ಕಾರಗೊಂಡಿರುವ ಔಷಧಿಗಳ ಜತೆಗೆ ಹೊಸ ಹೊಸ ರೋಗಗಳು ಹುಟ್ಟಿಕೊಳ್ಳುತ್ತಿರುವುದರ ಬಗ್ಗೆಯೂ ಗಮನ ಹರಿಸಬೇಕಾಗಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ವೀರಭದ್ರಯ್ಯ ಮಾತನಾಡಿ, ಇತ್ತೀಚೆಗೆ ರಾಜ್ಯ ಸರ್ಕಾರ ವೈದ್ಯರ ವಿಷಯದಲ್ಲಿ ತನ್ನದೇ ಅದ ನೀತಿ ನಿಯಮಾವಳಿಗಳನ್ನು ತರಲು ಮುಂದಾಗುತ್ತಿದೆ. ಆದರೆ ಅವುಗಳಲ್ಲಿ ಕೆಲವು ನಮ್ಮ ನೀತಿ ನಿಯಮಗಳ ವಿರುದ್ಧ ಇದ್ದಾಗ ಒಗ್ಗಾಟ್ಟಾಗಿ ವಿರೋಧಿಸಿದಲ್ಲಿ ಮಾತ್ರ ನ್ಯಾಯ ದೊರಕಲು ಸಾಧ್ಯವಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಯುವರಾಜ್ ಮಾತನಾಡಿ, ಸಂಘದಲ್ಲಿ ಒಗ್ಗಟ್ಟಿದ್ದರೆ ನ್ಯಾಯಯುತವಾಗಿ ಗೆಲವು ಸಾಧ್ಯವಿದೆ ಎಂಬುದನ್ನು ತಿಳಿಸಿದರು.
ಹೊಳೆನರಸೀಪುರ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಲಕ್ಷ್ಮೀಕಾಂತ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಡಾ. ವೀರಭದ್ರಯ್ಯ, ಡಾ. ಶ್ರೀನಿವಾಸ್ ಅವರನ್ನು ಗೌರವಿಸಿ ಅಭಿನಂದಿಸಲಾಯಿತು. ಡಾ.ವಿಜಯಕುಮಾರ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.