ಹಾಸನ

ನೆಲ-ಜಲ ಕನ್ನಡ ಕುಲ ರಕ್ಷಣೆಗೆ ಬದ್ಧ

Published On :

ಆಲೂರು : ಕನ್ನಡ ನಾಡು ನುಡಿ, ನೆಲ-ಜಲ ರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ  ಸದಾ ಸಿದ್ಧ ಎಂದು ರಾಜ್ಯಾಧ್ಯಕ್ಷ  ಟಿ.ಎ.ನಾರಾಯಣಗೌಡ ತಿಳಿಸಿದರು.
ಕರವೇ ತಾಲೂಕು ಘಟಕ ಪಟ್ಟಣದ ಕೆಇಬಿ ವೃತ್ತದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡಿಗರಿಗೆ ದೇಶದ ಯಾವುದೇ ಮೂಲೆಯಲ್ಲಿ ತೊಂದರೆಯಾದರೂ ನಾವು ಸಹಿಸುವುದಿಲ್ಲ ಎಂದು ಗುಡುಗಿದರು.
ರಾಜ್ಯದಲ್ಲಿ ಕನ್ನಡ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಎಂಇಎಸ್ ಕಾರ್ಯಕರ್ತರು ಬುದ್ದಿ ಕಲಿಯದಿದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ಮನುಕುಮಾರ್ ಮಾತನಾಡಿ, ರಾಜ್ಯದ ರಾಜಧಾನಿ ಸೇರಿದಂತೆ  ಪ್ರಮುಖ ಪಟ್ಟಣಗಳಲ್ಲಿ ಅನ್ಯ ಭಾಷಿಗರು ಹೆಚ್ಚಿದ್ದು,  ಅವರೊಂದಿಗೆ ಕನ್ನಡಿಗರು ಅವರ ಭಾಷೆಯಲ್ಲಿಯೇ ವ್ಯವಹರಿಸುತ್ತಿರುವುದು ಸರಿಯಲ್ಲ. ಇದೇ ರೀತಿಯಾದರೆ ಕನ್ನಡಿಗರನ್ನು ಹುಡುಕಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಅನ್ಯಭಾಷಿಗರು ಕನ್ನಡದಲ್ಲೇ ವ್ಯವಹರಿಸುವಂತೆ ಮಾಡಲು ಕನ್ನಡಿಗಾರದ ನಾವೆಲ್ಲರೂ ಕಾರ್ಯೋನ್ಮುಖರಾಗಬೇಕು ಎಂದರು.
ಚಿತ್ರನಟಿ ಅಶ್ವಿನಿ, ನಗರ ಘಟಕದ ಕರವೇ ಅಧ್ಯಕ್ಷ ಮಧು ಪಿ.ಗೌಡ, ನಗರ ಉಪಾಧ್ಯಕ್ಷ ವಿಶ್ವನಾಥ್, ಗೌರವಾಧ್ಯಕ್ಷ ರಾಜಪ್ಪ, ಸಂಜಯ್ ಬಾಬಾ, ಪ್ರಧಾನ ಕಾರ್ಯದರ್ಶಿ ಮಧು, ಮೋಹನ್, ಗುಬ್ಬಿ, ಮಂಜು, ಪ್ಯಾರಿ, ಉದಯ್, ಸುನಿಲ್, ದರ್ಶನ್, ಸೀನಣ್ಣ, ಆಟೋ ಮೂರ್ತಿ,  ಗಣೇಶ್, ಜೆಸಿಬಿ ಲೋಕಿ ದರ್ಶನ್ ಹಾಸನ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.