ಭ್ರಷ್ಟಾಚಾರ ತಡೆದರೆ ಮಾತ್ರ ಪ್ರಗತಿ
ಚನ್ನರಾಯಪಟ್ಟಣ: ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರು ಭ್ರಷ್ಟತೆ ಬಿಟ್ಟಾಗ ಮಾತ್ರ ತಮ್ಮ ದೇಶದ ಪ್ರಗತಿ ಸಾಧ್ಯ ಎಂದು ಪ್ರೊ.ಮಂಜಪ್ಪ ತಿಳಿಸಿದರು.
ತಾಲೂಕಿನ ವಡ್ಡರಹಳ್ಳಿ ಗ್ರಾಮದಲ್ಲಿ ಐಎಎಸ್ ಪರೀಕ್ಷೆಯಲ್ಲಿ ಉತ್ತಿರ್ಣರಾದ ಶಿಲ್ಪಾ ಶಂಕರಲಿಂಗ ಅವರಿಗೆ ಏರ್ಪಡಿಸಿದ್ದ ತವರು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭ್ರಷ್ಟತೆ ಹೆಚ್ಚಿರುವುದೇ ದೇಶದ ಹಿನ್ನಡೆಗೆ ಕಾರಣವಾಗಿದ್ದು, ಯುವಕರು ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿ ಪ್ರಗತಿಗೆ ಕಾರಣರಾಗಬೇಕು ಎಂದು ತಿಳಿಸಿದರು. ತಹಸೀಲ್ದಾರ್ ಡಾ.ನಾಗರಾಜು ಮಾತನಾಡಿ, ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವುದುಸುಲಭದ ಮಾತಲ್ಲ. ಇದು ಕಬ್ಬಿಣದ ಕಡಲೆಯಾಗಿದ್ದು, ಅದನ್ನು ಪಡೆಯಲು ಶ್ರಮ ಮುಖ್ಯ ಎಂದು ತಿಳಿಸಿದರು.
ಇದೇ ವೇಳೆ ಐಎಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಶಿಲ್ಪಾಶಂಕರಲಿಂಗ ತಮ್ಮ ಅನುಭವ ಹಂಚಿಕೊಂಡರು. ತಾಪಂ ಮಾಜಿ ಸದಸ್ಯ ವಡ್ಡರಹಳ್ಳಿ ರಾಜಣ್ಣ, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ರವೀಶ್, ಕರವೇ ತಾಲೂಕು ಘಟಕದ ನಿರ್ದೇಶಕ ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

