ಹಾಸನ

ಮಕ್ಕಳ ಶೈಕ್ಷಣಿಕ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಿ: ವೀರೇಶಾನಂದ ಸ್ವಾಮೀಜಿ

Published On :

ಕ.ಪ್ರ.ವಾರ್ತೆ ,  ಅರಸೀಕೆರೆ ,  ಡಿ. 9
ಬಡತನ ಬಹುದೊಡ್ಡ ಶಾಪ ಎಂದು ಪರಿಗಣಿಸದೆ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರ ಭವಿಷ್ಯವನ್ನು ಉಜ್ವಲವಾಗಿ ರೂಪಿಸಲು ಪೋಷಕ ವರ್ಗ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು
ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ಕಿವಿಮಾತು ಹೇಳಿದರು.  ತಾಲೂಕಿನ ಗಂಡಸಿ ಗ್ರಾಮದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಶಂಭುಲಿಂಗೇಶ್ವರ ಪೌಢಶಾಲೆಯ ಸುವರ್ಣ ಮಹೋತ್ಸವ ಹಾಗೂ ಪದವಿ ಪೂರ್ವ ಕಾಲೇಜು ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಶಾಲೆಯಲ್ಲಿನ ವಿದ್ಯಾರ್ಥಿಗಳ ನಡೆ-ನುಡಿಯು ಅವರ ವ್ಯಕ್ತಿತ್ವದ ಸಾಮ್ಯತೆಯನ್ನು ಪ್ರದರ್ಶಿಸುತ್ತದೆ. ಆದ್ದರಿಂದ ಶಿಸ್ತುಬದ್ದ ಶಿಕ್ಷಣವನ್ನು ನೀಡುವ ಮೂಲಕ ಭವ್ಯ ಭಾರತದ ಭಾರತರತ್ನಗಳನ್ನು ಬೆಳೆಸುವ ಶಿಕ್ಷಣ ವ್ಯವಸ್ಥೆಯನ್ನು ನಾವುಗಳು ರೂಪಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.  ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಮನುಷ್ಯನ ಜೀವನದಲ್ಲಿ ಗುರು ಮತ್ತು ಗುರಿ ಅತ್ಯಂತ ಮುಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ   ವಿದ್ಯಾರ್ಥಿಗಳು ನಿರಂತರ ಶ್ರಮ ವಹಿಸಿದರೆ ನಿಶ್ವಿತ ಗುರಿ ತಲುಪಲು ಸಾಧ್ಯ ಎಂದರು.
ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವಲ್ಲಭವೃಷಭದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ, ಜಿಪಂ ಅಧ್ಯಕ್ಷೆ ಅಂಬಿಕಾ ರಾಮಣ್ಣ,
ಗೋಣಿ ಮಠದ ರೇವಣ್ಣ ಸಿದ್ದೇಶ್ವರ ಸ್ವಾಮೀಜಿ, ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ತಾಪಂ ಅಧ್ಯಕ್ಷ ಎಚ್.ಟಿ.ಶಿವಮೂರ್ತಿ, ಜಿಪಂ ಸದಸ್ಯ ಹುಚ್ಚೇಗೌಡ, ತಾಪಂ  ಸದಸ್ಯರಾದ ಲಕ್ಷ್ಮಣ್, ಹನುಮೇಗೌಡ, ಗಂಡಸಿ ಗ್ರಾಪಂ ಅಧ್ಯಕ್ಷೆ ಗಂಗಮ್ಮ, ಶಂಭುಲಿಂಗೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಜಿ.ಸಿದ್ದಪ್ಪ, ಕಾರ್ಯದರ್ಶಿ ಜಿ.ಎಸ್.ಪಂಚಾಕ್ಷರಿ , ಪ್ರಾಂಶುಪಾಲ ಆನಂದ್ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.