ಹಾಸನ

ಅರಸೀಕೆರೆ ಬಿಜೆಪಿ ವಿಜಯೋತ್ಸವ

Published On :

ಕ.ಪ್ರ.ವಾರ್ತೆ ,  ಅರಸೀಕೆರೆ ,  ಡಿ.9
ಉತ್ತರ ಭಾರತದ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭಾರಿ ಜಯಭೇರಿ ಬಾರಿಸಿದ  ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಈ ವೇಳೆ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ಎನ್.ಡಿ.ಪ್ರಸಾದ್,  ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಅದಕ್ಷ ಆಡಳಿತ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸೋತು ಸುಣ್ಣವಾಗಿರುವ ಸಾಮಾನ್ಯ ಜನತೆ, ಕಾಂಗ್ರೆಸ್ ಪಕ್ಷವನ್ನು ಹೀನಾಯವಾಗಿ ಸೋಲಿಸುವ ಮೂಲಕ ತಮ್ಮ ಆಕ್ರೋಶವನ್ನು ತೋರ್ಪಡಿಸಿದ್ದು, ಮುಂದಿನ ಪ್ರಧಾನಿಯೆಂದೇ ಬಿಂಬಿತವಾಗಿರುವ ನರೇಂದ್ರಮೋದಿ ಅವರ ಮೋಡಿಯ ಮಾತಿನಿಂದ ಈ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲು ಸಾಧ್ಯವಾಯಿತು ಎಂದು ಹರ್ಷ ವ್ಯಕ್ತಪಡಿಸಿದರು.
ಲೋಕಸಭೆಗೆ ದಿಕ್ಸೂಚಿ: ನಗರ ಬಿಜೆಪಿ ಅಧ್ಯಕ್ಷ ಕಲ್ಗುಂಡಿ ಹಿರಿಯಣ್ಣ ಮಾತನಾಡಿ, ಈ ಚುನಾವಣೆ ಮುಂದಿನ ಲೋಕಸಭಾ ಚುನಾವಣೆಯ ದಿಕ್ಸೂಚಿಯಾಗಿದ್ದು, ಮುಂದೆ ನಡೆಯಲಿರುವ ಮಹಾ ಸಮರದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ತಿರಸ್ಕರಿಸಲಿದ್ದು ದೇಶಾದ್ಯಂತ ಬಿಜೆಪಿ ಜಯಭೇರಿ ಬಾರಿಸಿ ಅಖಂಡ ಬಹುಮತದಿಂದ ನರೇಂದ್ರಮೋದಿ ಈ ದೇಶದ ಪ್ರಧಾನ ಮಂತ್ರಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವುದರ ಮೂಲಕ ಕಾರ್ಯಕರ್ತರು ಜಯ ಘೋಷದೊಂದಿಗೆ ವಿಜಯೋತ್ಸವ ಆಚರಿಸಿದರು. ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಚೇತನ್‌ಕುಮಾರ್, ಮನೋಜ್, ಬೋರನಕೊಪ್ಪಲು ರವಿ, ಯುವ ಮೋರ್ಚಾ ಅಧ್ಯಕ್ಷ ದುಮ್ಮೇನಹಳ್ಳಿ ರಮೇಶ್, ಎಪಿಎಂಸಿ  ಸದಸ್ಯ ಗಂಗಾಧರ್, ಮಾಜಿ ಅಧ್ಯಕ್ಷರಾದ ಬಾಳೇಗೌಡ್ರು, ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಸುವರ್ಣಮ್ಮ, ಪುಟಾಣಿ ಚಿನ್ಮಯ್ ಮತ್ತಿತರರು ಉಪಸ್ಥಿತರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.