ಹಾಸನ

'ಕರ್ತವ್ಯ ಲೋಪವಾಗದಂತೆ ಎಚ್ಚರ ವಹಿಸಿ'

Published On :

ಗಂಡಸಿ: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಹೊರತೆಗೆಯುವ ಕಾರ್ಯಕ್ರಮದಲ್ಲಿ ಯಾವ ಲೋಪ ದೋಷಗಳಾಗಬಾರದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ  ನಟರಾಜ್ ತಿಳಿಸಿದರು.
ತಾಲೂಕಿನ ಗಂಡಸಿಯ ಪುಷ್ಪರವಿ ನ್ಯಾಷನಲ್ ಸ್ಕೂಲ್‌ನಲ್ಲಿ  ಇತ್ತೀಚೆಗೆ  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಏರ್ಪಡಿಸಿದ್ದ  ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನ್ಯಾಯಯುತವಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿಬೇಕೆಂದು ತೀರ್ಪುದಾರರಿಗೆ ಕಿವಿಮಾತು ಹೇಳಿದರು.
ಚಗಚಗೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸಿ.ಎನ್. ಚಿಕ್ಕೇಗೌಡ ಮಾತನಾಡಿ,  ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಸೂಕ್ತ ಪ್ರತಿಭೆಯನ್ನು ಹೊರತೆಗೆಯಲಿಕ್ಕೆ ಇರುವಂತಹ ಕಾರ್ಯಕ್ರಮ ಇದನ್ನು ಸಮರ್ಪಕವಾಗಿ ಬಳಸಿಕೊಂಡರೆ ಮುಂದೆ ದೊಡ್‌ಡ ದೊಡ್‌ಡ ಸಾಧನೆ ಮಾಡಬಹುದು ಎಂದು ತಿಳಿಸಿದರು. ಪುಷ್ಪರವಿ ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕರಾದ ಬಿ. ಎನ್. ರೇವಣ್ಣಗೌಡ ಅಧ್ಯಕ್ಷತೆ ವಹಿಸಿದ್ದರು.
 ರವಿಕುಮಾರ್ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ನುಡಿಗಳನ್ನು ತಿಳಿಸಿದರು ಅದರಲ್ಲಿ ಸ್ಪರ್ಧೆ ಯಾವ ರೀತಿ ನಡೆಯಬೇಕು, ತೀರ್ಪು ಹೇಗೆ ಕೊಡಬೇಕು ಹಾಗೂ ಬಹುಮಾನ ವಿತರಣೆ ಯಾವ ರೀತಿ ಇರಬೇಕೆಂದು ತಿಳಿಸಿಕೊಟ್ಟರು.
ಬಾಗೀವಾಳು ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ್ , ಗಂಡಸಿ ಹ್ಯಾಂಡ್ ಪೋಸ್ಟ್‌ನ ಮುಖ್ಯೋಪಾಧ್ಯಾಯಿನಿ ಶೈಲಜಾ, ಹಲವು ಶಾಲೆಗಳ ಮುಖ್ಯೋಪಾಧ್ಯಾಯರು,   ಸಹಶಿಕ್ಷಕರು ಹಾಗೂ  ಸಿ ಆರ್‌ಪಿ ಇದ್ದರು. ಪುಷ್ಪರವಿ ನ್ಯಾಷನಲ್ ಐ ಟಿ ಐ ಕಾಲೇಜಿನ ಕಿರಿಯ ತರಬೇತಿ ಅಧಿಕಾರಿ ಸಿ.ವಿ. ಚಂದ್ರೇಗೌಡ ನಿರೂಪಿಸಿದರು.  
ಶಿಕ್ಷಕ ವಿಲಿಯಂ ಸ್ವಾಗತಿಸಿದರು. ಶಿಕ್ಷಕಿ ಅಮೃತ ವಂದಿಸಿದರು. ಕಾರ್ಯಕ್ರಮದಲ್ಲಿ ಗಂಡಸಿ ವೃತ್ತದ ಸುಮಾರು 10 ಶಾಲೆಗಳಿಂದ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.