ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ
ಹೊಳೆನರಸೀಪುರ: ಇಲ್ಲಿನ ಕಂದಾಯ ಇಲಾಖೆಯ ವತಿಯಿಂದ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ನೀಡಲಾಗುವ ನಾನಾ ವೇತನ ಸವಲತ್ತುಗಳು ಹಾಗೂ ಆಹಾರ ಇಲಾಖೆಯ ವತಿಯಿಂದ ನೀಡಲಾಗುವ ಬಿಪಿಎಲ್ ಪಡಿತರ ಚೀಟಿಗಳನ್ನು ಶಾಸಕ ಎಚ್.ಡಿ. ರೇವಣ್ಣ ಇತ್ತೀಚೆಗೆ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಫಲಾನುಭವಿಗಳಿಗೆ ವಿತರಿಸಿದರು.
ನಂತರ ಮಾತನಾಡಿದ ಅವರು, ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ ಹಾಗೂ ಸಂಧ್ಯಾಸುರಕ್ಷಾ ಯೋಜನೆಯಡಿಯಲ್ಲಿ 139 ಫಲಾನುಭವಿಗಳಿಗೆ ವೇತನವನ್ನು ಅನುಮೋದಿಸಿ ನೀಡಲಾಗಿದೆಯಲ್ಲದೇ, ಅಂತ್ಯಸಂಸ್ಕಾರ ಸಹಾಯ ನಿಧಿ ಹಾಗೂ ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿಯಲ್ಲಿನ 106 ಫಲಾನುಭವಿಗಳಿಗೆ ಸಹಾಯ ಧನವನ್ನು ನೀಡಲಾಗಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಕುಟುಂಬ ನೆರವು ಯೋಜನೆಯಡಿಯಲ್ಲಿ ತಾಲೂಕಿನ 110 ಫಲಾನುಭವಿಗಳಿಗೆ ತಲಾ 10ಸಾವಿರ ರೂಗಳ ಚೆಕ್ಗಳು ಬಂದಿದ್ದು, ಕೆಲವೇ ದಿನಗಳಲ್ಲಿ ಅವುಗಳನ್ನು ವಿತರಿಸಲಾಗುವುದು ಎಂದು ಹೇಳಿದ ಶಾಸಕ ಎಚ್.ಡಿ. ರೇವಣ್ಣ ಅವರು, ಪಟ್ಟಣ ವ್ಯಾಪ್ತಿಯಲ್ಲಿ ಕೈತಪ್ಪಿರುವ ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ, ವಿವಿಧ ವೇತನಗಳು ಹಾಗೂ ಸರ್ಕಾರದ ಯೋಜನೆಗಳಡಿಯಲ್ಲಿ ನ್ಯಾಯಯುತವಾಗಿ ಸಿಗಬೇಕಾದ ವೇತನಗಳನ್ನು ವಿತರಿಸಲು ಕ್ರಮ ಕೈಗೊಳ್ಳುವಂತೆ ಶಾಸಕರು ತಹಸೀಲ್ದಾರ್ಗೆ ಸೂಚಿಸಿದರು.
ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷರು ಹಾಗೂ ಹೋರಾಟಗಾರ ನೆಲ್ಸನ್ ಮಾಂಡೇಲಾ ನಿಧನದ ಪ್ರಯುಕ್ತವಾಗಿ ಸರಳವಾಗಿ ಆಚರಿಸಲಾದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಆರ್.ಬಿ.ಶಿವಶಂಕರಪ್ಪ, ತಹಸೀಲ್ದಾರ್ ಗ್ರೇಡ್-2 ಪ್ರಸನ್ನ ಮೂರ್ತಿ, ಶಿರಸ್ತೇದಾರ್ ಉಲಿವಾಲ ಮೋಹನ್ ಕುಮಾರ್, ತಾಪಂ ಇಓ ತಮ್ಮಣ್ಣಗೌಡ, ಆಹಾರ ಇಲಾಖೆಯ ರಾಮಚಂದ್ರ, ರಾಜಸ್ವ ನಿರೀಕ್ಷ ನಾಗರಾಜು, ಗ್ರಾಮ ಲೆಕ್ಕಾಧಿಕಾರಿಗಳಾದ ಅಸ್ಲಂ ಪಾಷ, ಶಿವಕುಮಾರ್, ಯೋಗೇಶ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

