ಹಾಸನ

16ರಂದು ಎಸ್ಸಿ ಮೋರ್ಚಾ ಕಾರ್ಯಕಾರಣಿ ಸಭೆ

Published On :

ಹಾಸನ: ಇದೇ ತಿಂಗಳು 16ರಂದು ಬಿಜೆಪಿ ಎಸ್ಸಿ ಮೋರ್ಚಾದ ಕಾರ್ಯಕಾರಣಿ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ ತಿಳಿಸಿದರು. ಕಾರ್ಯಕಾರಣಿ ಸಭೆಯು ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಲಿದ್ದು, ಎಸ್ಸಿ ಮೋರ್ಚಾ ರಾಜ್ಯಾ ಉಪಾಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಅವರು ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲಿದ್ದು, ಜಿಲ್ಲೆಯ ಎಲ್ಲಾ ಕಾರ್ಯಕರ್ತರು ಸಭೆಗೆ ಭಾಗವಹಿಸಬೇಕು ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬೇಲೂರಿನ ತಾಲೂಕಿನ ನಂಜಾಪುರ ಗ್ರಾಮದಲ್ಲಿ ಇತ್ತೀಚೆಗೆ ಬೆಂಕಿಗೆ ಮನೆಗಳು ಆಹುತಿಯಾಗಿದ್ದು, ಅವರಿಗೆ ಸರಿಯಾಗಿ ಪರಿಹಾರವನ್ನು ಒದಗಿಸಿಲ್ಲ. ಜಿಲ್ಲಾಡಳಿತದವತಿಯಿಂದ ಆವರಿಗೆ ತಾತ್ಕಾಲಿಕ ಆಶ್ರಯ ನೀಡಿಲಾಗಿದೆ. ದಲಿತ ಮುಖಂಡರಾಗಿರುವಂತಹ ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪನವರು ಇಂತಹ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದರು. ಅಷ್ಟೇ ಅಲ್ಲದೆ ಬೇಲೂರಿನಲ್ಲಿ ಇರುವ ಸರ್ಕಾರಿ ಎಸ್ಸಿ ಹಾಸ್ಟೆಲ್‌ಗಳ ವ್ಯವಸ್ಥೆ ಸರಿ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, ಹಾಸ್ಟೆಲ್ ಅನ್ನು ಬೇರೆಡೆ ಸ್ಥಳಾಂತರಿಸಬೇಕು. ಗಂಗಾಕಲ್ಯಾಣ ಯೋಜನೆಯಲ್ಲಿ ಬೋರ್‌ವೆಲ್‌ಗಳನ್ನು ತೆಗೆಯಲಾಗಿದೆ. ಆದರೆ ಆದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲಾಗಿದೆ ಎಂದರು.  ಈ ಸಂದರ್ಭದಲ್ಲಿ ಮುಖಂಡರಾದ ಪ್ರಸನ್ನಕುಮಾರ್, ಪಾಲಲೋಚನ, ಆನಂದ್, ಮಾಧ್ಯಮ ಪ್ರಮುಖ ರವಿ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.