ಎಸ್.ಎಂ.ಕೆ ಬಡಾವಣೆಗೆ ಅಧಿಕಾರಿಗಳ ತಂಡ
ಕ.ಪ್ರ.ವಾರ್ತೆ , ಹಾಸನ , ಡಿ. 10
ಹಾಸನ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಾರ್ವಜನಿಕರಿಗೆ ನಿವೇಶನ ವಿತರಿಸಲು ಸಿದ್ಧವಾಗುತ್ತಿರುವ ಎಸ್.ಎಂ. ಕೃಷ್ಣ ನಗರ ಬಡಾವಣೆಗೆ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಅವರು ಹಿರಿಯ ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
453 ಎಕರೆಯಷ್ಟು ವಿಶಾಲ ಭೂಪ್ರದೇಶದಲ್ಲಿ ರೂಪುಗೊಳ್ಳುತ್ತಿರುವ ಬಡಾವಣೆಯಲ್ಲಿ ರಸ್ತೆ, ಪಾರ್ಕ್, ಕುಡಿಯುವ ನೀರು, ಯುಜಿಡಿ ಸೇರಿದಂತಮೂಲಭೂತ ಸೌಕರ್ಯಗಳನ್ನು ಎಲ್ಲೆಲ್ಲಿ ಹೇಗೆ ನೀಡಲಾಗುತ್ತದೆ ಎಂದು ಪರಿಶೀಲಿಸಿದ ಅವರು ಬಡಾವಣೆ ಅಭಿವೃದ್ಧಿಗೆ ನಕ್ಷೆ ರೂಪಿಸಿರುವ ವಾಸ್ತು ಶಿಲ್ಪಿ ರಮೇಶ್ ಅವರಿಂದ ಮಾಹಿತಿ ಪಡೆದರು.
ಅನುಮೋದನೆ: ನಿವೇಶನಗಳನ್ನು ಶೀಘ್ರದಲ್ಲಿ ಹಂಚಿಕೆ ಮಾಡಬೇಕಾಗಿರುವುದರಿಂದ ಪ್ರಾಥಮಿಕ ಅಗತ್ಯಗಳಾದ ಡಿ ಮಾರ್ಕಿಂಗ್ ಮತ್ತಿತರ ಚಟುವಟಿಕೆಗಳನ್ನು ಶೀಘ್ರವಾಗಿ ನಡೆಸುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಎಸ್.ಎಂ. ಕೃಷ್ಣ ನಗರಕ್ಕೆ ಅಗತ್ಯವಿರುವ 453 ಎಕರೆ ಜಮೀನಿನ ಸರ್ವೆ ಕಾರ್ಯ ಮುಕ್ತಾಯಗೊಂಡಿದ್ದು ನಕ್ಷೆ ಕೂಡ ಅನುಮೋದನೆಯಾಗಿದೆ. ಡಿ ಮಾರ್ಕಿಂಗ್ ಮಾಡಿ ಕಲ್ಲುಗಳನ್ನು ನೆಡಲು ಸೂಚನೆ ನೀಡಲಾಗಿದ್ದು ಒಂದು ವಾರದೊಳಗೆ ನಡೆಯುವ ಹೂಡಾ ಸಭೆಯಲ್ಲಿ ಈ ವಿಚಾರವನ್ನು ಮಂಡಿಸಲಾಗುವುದು. ಭೂಮಾಲಿಕರಿಗೂ ಲಾಟರಿ ಮೂಲಕ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಯೋಜನೆ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ ಮತ್ತು ಏಕಕಾಲದಲ್ಲಿ ನಿವೇಶನ ಹಂಚಿಕೆ ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಲೇಔಟ್ ಅತ್ಯಂತ ಸುಂದರವಾಗಿ ರೂಪುಗೊಳ್ಳಲಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ, ಉಪವಿಭಾಗಾಧಿಕಾರಿ ಶರತ್, ಹೂಡಾ ಆಯುಕ್ತ ರಮೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

