ನಾನಾ ಸಂಘಟನೆಗಳಿಂದ ಒಡೆಯರ್ಗೆ ಶ್ರದ್ಧಾಂಜಲಿ
ಕನ್ನಡಪ್ರಭ ವಾರ್ತೆ, ಹಾಸನ, ಡಿ. 11
ಯದುವಂಶದ ಮೈಸೂರು ಸಂಸ್ಥಾಪನೆಯ ಕೊನೆಯ ಕೊಂಡಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನರಾದ ಹಿನ್ನಲೆಯಲ್ಲಿ ಜಿಲ್ಲಾ ಅರಸು ಸಂಘ ಹಾಗೂ ನವ ಕರ್ನಾಟಕ ಯುವ ಶಕ್ತಿ ವೇದಿಕೆ ವತಿಯಿಂದ ಬುಧವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿ ಒಡೆಯರ ಭಾವಚಿತ್ರ ಇಟ್ಟು ಪುರ್ಷ್ಪಾಚನೆ ಮಾಡಿ, ಶಾಂತಿ ಕೋರುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅರಸು ಸಂಘದ ಅಧ್ಯಕ್ಷ ಟಿ.ಆರ್. ವಿಜಯರಾಜೇ ಅರಸ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ರಾಜೇ ಅರಸ್, ಉಪಾಧ್ಯಕ್ಷ ಎಚ್. ಸುಬ್ರಮಣ್ಯರಾಜೇ ಅರಸ್ ಹಾಗೂ ನವಕರ್ನಾಟಕ ಯುವ ಶಕ್ತಿ ವೇದಿಕೆ ಅಧ್ಯಕ್ಷ ಡಿ. ಶಂಕರೇಗೌಡ, ಉಪಾಧ್ಯಕ್ಷ ಬಸವರಾಜ್, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಗೌಡ, ರಾಜ ಸಂಘದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶರ್ಮ ಹಾಗೂ ಇತರರು ಇದ್ದರು.
ಶ್ರೀಕಂಠದತ್ತ ಒಡೆಯರ್ಗೆ 'ಬಂದ್' ಗೌರವ
ಬೇಲೂರು: ಮೈಸೂರು ಅರಸ ಶ್ರೀಕಂಠದತ್ತ ಒಡೆಯರ್ ಅವರು ನಿಧನರಾದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಬುಧವಾರ ಸ್ವಯಂಪ್ರೇರಿತವಾಗಿ ಬಂದ್ ಆಚರಿಸಲಾಯಿತು.
ಇಂದು ವರ್ತಕರ ಸಂಘದ ಕರೆಯ ಮೇರೆಗೆ ಎಲ್ಲಾ ವರ್ತಕರು ತಮ್ಮ ವ್ಯಾಪಾರ ವಹಿವಾಟುಗಳನ್ನು ಮದ್ಯಾಹ್ನ 2ರಿಂದ ಸಂಜೆ 5ವರೆಗೆ ಅಂಗಡಿಗಳನ್ನು ಬಂದ್ ಮಾಡುವ ಮೂಲಕ ಒಡೆಯರಿಗೆ ಸಂತಾಪ ಸೂಚಿಸಿದರು.
ಈ ಸಂದರ್ಭದಲ್ಲಿ ವರ್ತಕರ ಸಂಘದ ಪ್ರಧಾನ ಕಾರ್ಯದರ್ಶಿ ಅರೀಫ್, ಸಂಘದ ಕೆ.ಎಂ. ವಿರೂಪಾಕ್ಷ, ಪ್ರಕಾಶ್ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಎನ್. ಅನಂತು, ಪತ್ರಕರ್ತ ಅನಂತರಾಜೇ ಅರಸು, ಪ್ರಭಾಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

