ಯುವಕ ಅನುಮಾನಾಸ್ಪದ ಸಾವು
ಹಾಸನ: ಹಾಸನದ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಕೇರ್ ಟೇಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಹೊನ್ನ್ಯಾಳು ಗ್ರಾಮದ ಭೀಮಪ್ಪ ಶಿವಪ್ಪ ಲಮಾಣಿ ಎಂಬವರ ಪುತ್ರ ಅರುಣ್ ಬಿ. ದೊಡ್ಡಮನಿ (22) ಮೃತಪಟ್ಟ ದುರ್ದೈವಿಯಾಗಿದ್ದು, ಈತ ತನ್ನ ಸಾವಿಗೆ ಹಾಸ್ಟೆಲ್ ವಾರ್ಡನ್ ಡಾ. ಜಯರಾಂ ಕಾಣರ ಎಂದು ಪತ್ರ ಬರೆದು ಸಾವನ್ನಪ್ಪಿದಾನೆ. ಈ ಸಂಬಂಧ ದುದ್ದ ಪೊಲೀಸರು, ವಾರ್ಡನ್ ಅವರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
50 ಸಾವಿರ ನೀಡಲಾಗಿತ್ತು: ಕಳೆದ 8 ತಿಂಗಳಿಂದ ಈತ ಹಾಸನದ ಪಶು ವೈದ್ಯಕೀಯ ಕಾಲೇಜಿನ ಬಾಲಕರ ಹಾಸ್ಟೆಲ್‌ನ ವಿದ್ಯಾರ್ಥಿನಿಲಯದಲ್ಲಿ ಕೇರ್ ಟೇಕರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಕಳೆದ ರಾತ್ರಿ ಅನುಮಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಹಣದ ದುರಾಸೆಯಿಂದ ನನ್ನ ಮಗನನ್ನು ಹಾಸ್ಟೆಲ್ ವಾರ್ಡನ್ ಸಾಯಿಸಿದ್ದಾರೆ ಎಂದು ಅರುಣ್ ತಂದೆ ಆರೋಪಿಸಿದ್ದಾರೆ. ಪದೇ ಪದೆ ಹಣ ನೀಡುವಂತೆ ವಾರ್ಡನ್ ಪೀಡಿಸುತ್ತಿದ್ದು, ರು. 50 ಸಾವಿರ ಹಣ ನೀಡಲಾಗಿತ್ತು ಎನ್ನಲಾಗಿದೆ.
ಡೀನ್ ಸ್ಪಷ್ಟನೆ: ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಕಾಲೇಜಿನ ಡೀನ್ ನರಸಿಂಹಮೂರ್ತಿ ಅವರು ಈ ಬಗ್ಗೆ ನಮಗೇನೂ ತಿಳಿದಿಲ್ಲ. ಕಳೆದ ರಾತ್ರಿ ಅರುಣ್ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನುವ ಮಾಹಿತಿ ಬಂತು. ಕೂಡಲೇ ಆತನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದರ ಹಿಂದೆ ಯಾರದೇ ಕೈವಾಡ ಇದ್ದರೂ, ಅಪರಾಧ ಸಾಬೀತಾದಲ್ಲಿ ಅವರ ವಿರುದ್ಧ ಕ್ರಮಕೈಗೊಂಡು, ಈ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

