ಶಾಲಾ ಆಮಂತ್ರಣದಲ್ಲಿ ಆಂಗ್ಲಭಾಷೆ ಬಳಕೆ: ದೂರು
ಕ.ಪ್ರ. ವಾರ್ತೆ, ಬೇಲೂರು, ಡಿ.10
ಶಾಲಾ ಕಾಲೇಜುಗಳಲ್ಲಿ ವಾರ್ಷಿಕೋತ್ಸವ ಆಮಂತ್ರಣ ಪತ್ರಿಕೆಯನ್ನು ಆಂಗ್ಲಭಾಷೆಯಲ್ಲಿ ಮುದ್ರಿಸಲಾಗುತ್ತಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಮಂಗಳವಾರ ತಾಲೂಕು ಕರವೇಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ, ತಾಲೂಕಿನಾದ್ಯಂತ ಇರುವ ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಂಪೂರ್ಣವಾಗಿ ಆಂಗ್ಲ ಭಾಷೆಯಲ್ಲಿ ಮುದ್ರಿಸಲಾಗುತ್ತಿದೆ.
ಮುದ್ರಿತವಾಗಿರುವ ಆಂಗ್ಲ ಭಾಷೆಯ ಆಹ್ವಾನ ಪತ್ರಿಕೆಗಳು ಕರವೇಗೆ ಲಭ್ಯವಿದ್ದು ಈಗಾಗಲೇ ಅದನ್ನು ಇಲಾಖೆಯ ಗಮನಕ್ಕೆ ತರಲಾಗಿದೆ.
ಕನ್ನಡ ನಾಡಿಯಲ್ಲಿ ಕನ್ನಡ ಕಡ್ಡಾಯವಾಗಿರಬೇಕು ಎಂಬುದು ಕೇವಲ ಬಾಯಿ ಮಾತಾಗಿ ಉಳಿದಿದ್ದು ಪ್ರತಿಯೊಂದು ಪತ್ರ ವ್ಯವಹಾರವೂ ಆಂಗ್ಲ ಭಾಷೆಯಲ್ಲಿ ನಡೆಯುತ್ತಿದ್ದು ಕನ್ನಡ ಭಾಷೆಗೆ ಅನ್ಯಾಯ ಮಾಡಲಾಗುತ್ತಿದೆ. ಈಗಲಾದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಚ್ಚೆತ್ತು ಕೂಡಲೇ ಪ್ರತಿಯೊಂದು ಶಾಲಾ ಕಾಲೇಜುಗಳು ನಡೆಸುವ ವಾರ್ಷಿಕೋತ್ಸವ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಸಂಪೂರ್ಣ ಕನ್ನಡದಲ್ಲೇ ಮುದ್ರಿಸಬೇಕು ಎಂದು ಸೂಚಿಸಬೇಕು ಮತ್ತು ಆ ರೀತಿ ಮಾಡದೇ ಮತ್ತೆ ಆಂಗ್ಲ ಭಾಷೆಯಲ್ಲಿ ಮುದ್ರಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಮ್ಮ ಮನವಿಗೆ ಶಾಲಾ ಕಾಲೇಜು ಹಾಗೂ ಇಲಾಖೆ ಕಿವಿಗೊಡದಿದ್ದರೆ ಅಂತಹವರ ವಿರುದ್ಧ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು. ಕರವೇ ನಗರಾಧ್ಯಕ್ಷ ಪ್ರಸನ್ನ, ಪ್ರಧಾನ ಕಾರ್ಯದರ್ಶಿ, ಖಾದರ್, ನಿಂಗರಾಜು, ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

