ಹೊಣೆಗಾರಿಕೆಯಿಂದ ನುಣುಚಿಕೊಂಡ ಅಧಿಕಾರಿಗಳು
ಕ.ಪ್ರ.ವಾರ್ತೆ, ಸಕಲೇಶಪುರ, ಡಿ. 11
ಅಕ್ರಮ ಮರಳುಗಾರಿಕೆ ತಡೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಾದ ಅಧಿಕಾರಿಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಮಾತನಾಡಿದ ಪ್ರಸಂಗ ಮಂಗಳವಾರ ಪಟ್ಟಣದ ಮಿನಿವಿಧಾನ ಸೌಧದಲ್ಲಿ ಪತ್ರಕರ್ತರು ಹಾಗೂ ಅಧಿಕಾರಿಗಳ ನಡುವೆ ನಡೆದ ಸಂವಾದದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಹಸೀಲ್ದಾರ್ ಪಾರ್ವತಿ, ಮರಳು ಮಾಫಿಯಾದಿಂದ ವಾಹನ ಸುಟ್ಟುಹಾಕುವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಕಷ್ಟಕರವಾಗಿದೆ.
ಜೀವಭಯವಿದೆ: ಪೊಲೀಸರ ನೆರವು ಕೇಳಿದರೆ ಸಮಯಕ್ಕೆ ಸರಿಯಾಗಿ ಪೊಲೀಸರು ಆಗಮಿಸುವುದಿಲ್ಲ. ಇದರಿಂದಾಗಿ ನಮಗೆ ಜೀವಭಯವಿದ್ದು ರಾತ್ರಿವೇಳೆ ಕಾರ್ಯಚರಣೆ ನಡೆಸುವುದು ಅಸಾಧ್ಯ. ಇದರಿಂದಾಗಿ ತಾಲೂಕಿನಲ್ಲಿ ಮರಳುಗಾರಿಕೆ ಅವ್ಯಕ್ತವಾಗಿ ಮುಂದುವರಿಯಲು ಕಾರಣವಾಗಿದೆ ಎಂದರು.
ಮಾಹಿತಿ ಇಲ್ಲ: ಅಕ್ರಮ ಮರಳುಗಾರಿಕೆಯಲ್ಲಿ ಹಿಡಿದು ತಂದ ವಾಹನಗಳನ್ನು ರಾತ್ರೋರಾತ್ರಿ ತಾಲೂಕು ಕಚೇರಿಯಿಂದ ಅಕ್ರಮವಾಗಿ ತೆಗೆದುಕೊಂಡು ಹೋಗುತ್ತಿದ್ದಾರೆಂಬ ಅಸಹಾಯಕತೆ ವ್ಯಕ್ತಪಡಿಸಿದ ತಹಸೀಲ್ದಾರ್ ಅವರಿಗೆ ಪಟ್ಟಣದ ಹಳೇಸಂತವೇರಿ ಬಡಾವಣೆಯ ಪ್ರಮುಖ ರಸ್ತೆಯ ಸಮೀಪವೇ ನೂರಾರು ಟ್ರಾಕ್ಟರ್ ಅಕ್ರಮ ಮರಳು ಸಂಗ್ರಹವಾಗಿರುವ ಬಗ್ಗೆ ಪ್ರಶ್ನಿಸಿದಾಗಲೂ ಈ ಬಗ್ಗೆ ಮಾಹಿತಿ ಇಲ್ಲ ಎಂದರು.
ಕಾನೂನುಬಾಹಿರ: ಸಾರಿಗೆ ಇಲಾಖೆಯ ಅನಿಲ್ ಕುಮಾರ್ ಮಾತನಾಡಿ, ಅಕ್ರಮ ಮರಳುಗಾರಿಕೆ ಮಾಡುತ್ತಿರುವ ವಾಹನಗಳನ್ನು ತಡೆದರೆ ಚಾಲಕರು ವಾಹನ ಬಿಟ್ಟು ಓಡಿಹೋಗುತ್ತಾರೆ. ಹೀಗೆ ರಸ್ತೆಯಲ್ಲಿ ನಿಂತ ವಾಹನಗಳನ್ನು ವಶಕ್ಕೆ ಪಡೆಯುವುದು ಕಾನೂನುಬಾಹಿರವಾಗಿದೆ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.
ನಮ್ಮ ವ್ಯಾಪ್ತಿಗೆ ಬರುವುದಿಲ್ಲ: ವೃತ್ತನಿರೀಕ್ಷಕ ಗುರುರಾಜ್ ಮಾತನಾಡಿ, ಅಕ್ರಮ ಮರಳುಗಾರಿಕೆ ತಡೆಯುವುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಕಂದಾಯ ಇಲಾಖೆ ಅಥಾವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ರಕ್ಷಣೆ ಕೇಳಿದರೆ ರಕ್ಷಣೆ ನೀಡುವುದು ನಮ್ಮ ಕರ್ತವ್ಯವಾಗಿದೆ ಎಂದು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಂಡರು ಒಟ್ಟಾರೆ ಅಕ್ರಮ ಮರಳುಗಾರಿಕೆ ನಡೆಸಲು ಇರುವ ಅಡ್ಡಿ ಎತ್ತಿಹಿಡಿಯುವ ಮೂಲಕ ಅಕ್ರಮ ಮರಳುಗಾರಿಕೆ ಕಡಿವಾಣ ಹಾಕುವುದು ಅಸಾಧ್ಯ ಎಂಬುದನ್ನು ಸ್ವಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

