'ಅಂಗವಿಕಲರು ಕೀಳರಿಮೆ ಬಿಡಬೇಕು'
ಹಾಸನ: ಅಂಗವಿಕಲರು ಕೀಳರಿಮೆ ಬಿಟ್ಟು ಸಾಧನೆ ಮಾಡುವ ನಿಟ್ಟಿನಲ್ಲಿ ಯೋಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಪಟೇಲ್ ಶಿವರಾಂ ಕರೆ ನೀಡಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರಾಜ್ಯ ಸರ್ಕಾರಿ ಅಂಗವಿಕಲರ ನೌಕರರ ಸಂಘ ಹಾಗೂ ಜಿಲ್ಲಾ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಹಾಗೂ ಜಿಲ್ಲಾ ಸರ್ಕಾರಿ ಅಂಗವಿಕಲ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ಯಾರಾಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಪಡೆದ ಜಿಲ್ಲೆಯವನಾದ ಗಿರೀಶ್ ಕೂಡ ಸಾಧನೆ ಮೂಲಕವೇ ತನ್ನ ಗುರಿ ಮುಟ್ಟಿ ದೇಶಕ್ಕೆ, ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಕೀರ್ತಿ ತಂದರು ಎಂದು ಪ್ರಶಂಸಿಸಿದರು.
ಹೋರಾಟ ಇಲ್ಲದೆ ಯಾವ ಬೇಡಿಕೆಗಳೂ ಈಡೇರುವುದಿಲ್ಲ. ಅದೇ ರೀತಿ ಇತ್ತೀಚೆಗೆ ಮೃತಪಟ್ಟ ನೆಲ್ಸನ್ ಮಂಡೇಲಾ ಕೂಡ ಹೋರಾಟದ ಮೂಲಕವೇ ಸೆರಮನೆ ಸೇರಿದವರು. ಒಬ್ಬ ಶಾಂತಿಧೂತನಾಗಿದ್ದು, ವರ್ಗಭೇದ ಮಾಡದೆ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯಕ್ಕಾಗಿ ನಾನಾ ಹೋರಾಟ ಮಾಡಿದ್ದರು ಎಂದು ಹೇಳಿದರು.
ನಂತರ ಅಂಗವಿಕಲರಲ್ಲಿ ಸಾಧನೆ ಮಾಡಿದವರನ್ನು ಹಾಗೂ ವಿಕಲಚೇತನರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಅಂಗವಿಕಲ ನೌಕರರನ್ನು ಗುರುತಿಸಿ ಸನ್ಮಾನಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶ್ರೀನಿವಾಸ್, ಅಂಗವಿಕಲ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ಜೆ. ರಾಮಕೃಷ್ಣಯ್ಯ, ರಾಜ್ಯ ಅಂಗವಿಕಲ ನೌಕರರ ಸಂಘದ ಅಧ್ಯಕ್ಷ ಎಸ್. ರೇಣುಕಾರಾಧ್ಯ, ಪ್ರಧಾನ ಕಾರ್ಯದರ್ಶಿ ಟಿ.ಟಿ. ಗಿರಿಯಪ್ಪ, ಸಂಘಟನಾ ಕಾರ್ಯದರ್ಶಿ ಬೀರಪ್ಪ ಹಡಂಗಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಲೀಲಾವತಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಶಿವೇಗೌಡ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲೇಶ್, ತಾಲೂಕು ಅಧ್ಯಕ್ಷ ಬಿ.ಸಿ. ಈರಯ್ಯ, ಕೋಶಾಧ್ಯಕ್ಷ ಎಸ್. ಅಂತೋಣಪ್ಪ, ಉಪಾಧ್ಯಕ್ಷ ಚಂದ್ರಾಯಿಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

