ಹಾಸನ

ಎಂಸಿಇನಲ್ಲಿ ತೇಲಿದ 'ನೆನಪಿನ ದೋಣಿ'

Published On :

ಕ.ಪ್ರ.ವಾರ್ತೆ ಹಾಸನ ಡಿ.12
ನಗರದ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳ ನೆನಪಿನ ದೋಣಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ದೇಶದ ಹಲವೆಡೆಗಳಲ್ಲಿ ನೆಲೆಸಿರುವ ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಕಾರ್ಯದ ಆರ್.ಟಿ. ದ್ಯಾವೇಗೌಡ ಮಾತನಾಡಿ, ಹಿರಿಯ ವಿದ್ಯಾರ್ಥಿಗಳ ಕಾರ್ಯಕ್ರಮ ಈ ಸಂಸ್ಥೆಯ ಹಬ್ಬದ ದಿನವಾಗಿದ್ದು, ಈ ದಿನ ಸಂಸ್ಥೆಯ ಹೆಮ್ಮೆಯ ದಿನವೆಂದು ಹೇಳಿದರು. ಈ ವಿದ್ಯಾಸಂಸ್ಥೆಯ ಬೆಳವಣಿಗೆಯಲ್ಲಿ ಎಲ್ಲ ಹಿರಿಯ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ವಿದ್ಯಾಲಯದ ಸರ್ವತೋಮುಖ ಬೆಳವಣಿಗೆಯಲ್ಲಿ ಪಾಲ್ಗೊಳ್ಳಬೇಕೆಂದು ಆಹ್ವಾನಿಸಿದರು.  
ನಿರ್ದೇಶಕ ಜಿ.ಎಲ್. ಮುದ್ದೇಗೌಡ ಮಾತನಾಡಿ, ವಿದ್ಯಾರ್ಥಿವೇತನವನ್ನು ನೀಡುತ್ತಾ ಬಂದಿರುವ ಎಲ್ಲ ಹಿರಿಯ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಹಿರಿಯ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾ ಈ ವಿದ್ಯಾಲಯವು ತಾಂತ್ರಿಕ ಶಿಕ್ಷಣದ ಜೊತೆಯಲ್ಲಿ ಜೀವನದ ಮೌಲ್ಯಗಳನ್ನು ಉಳಿಸಿ ಬೆಳೆಸಿ ಉತ್ತಮ ಜೀವನಕ್ಕೆ ದಾರಿ ತೋರಿಸಿದಂಥ ಈ ಮಹಾವಿದ್ಯಾಲಯವನ್ನು ಮತ್ತು ಬೋಧಕರನ್ನು ಸ್ಮರಿಸಿದರು.
ಖಜಾಂಚಿ ಶೇಷಗಿರಿ, ನಿರ್ದೇಶಕ ಚೌಡುವಳ್ಳಿ ಪುಟ್ಟರಾಜು, ಕಾಲೇಜಿನ ಪ್ರಾಂಶುಪಾಲ  ಡಾ.ಎಂ.ವಿ. ಸತ್ಯನಾರಾಯಣ, ಉಪಪ್ರಾಂಶುಪಾಲ ಡಾ.ಎಂ.ಎಸ್. ರವಿಪ್ರಕಾಶ್ ಹಾಗೂ ಡಾ.ಕೆ.ಎಸ್. ಜಯಂತ್, ಎಂಸಿಇ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅರವಿಂದ ಪ್ರಕಾಶ್ ಮತ್ತು ಖಜಾಂಚಿ ಆಶಾ ಇದ್ದರು.
ಇದೇ ಸಂದರ್ಭದಲ್ಲಿ ಹಲವು ಹಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಿರಿಯ ವಿದ್ಯಾರ್ಥಿಗಳ ವತಿಯಿಂದ ಬಡ ಮತ್ತು ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.