ಜ. 15 ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನ
ಕ.ಪ್ರ.ವಾರ್ತೆ ಹೊಳೆನರಸೀಪುರ ಡಿ.12
ಜಿಲ್ಲಾ ದಲಿತ ಸಾಹಿತ್ಯ ಪರಿಷತ್, ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ನಾಗಭೂಮಿ ವಿವಿದೋದ್ದೇಶ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಜಿಲ್ಲಾ ದಲಿತ ಸಾಹಿತ್ಯ ಸಮ್ಮೇಳನ ಜ.15ರಂದು ಹಾಸನದ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ತಾಲೂಕು ದಲಿತ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಟಿ. ಲಕ್ಷ್ಮಣ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.15 ರಂದು ಜಿಲ್ಲೆಯ ಎಲ್ಲಾ ದಲಿತ ಸಾಹಿತಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಿಲಿದ್ದು ಸಮ್ಮೇಳಾನಾಧ್ಯಕ್ಷರಾಗಿ ದುದ್ದ ಶ್ರೀನಿವಾಸ್ ಭಾಗವಹಿಸಲಿದ್ದಾರೆ.
ಸಾಹಿತ್ಯ ಸಮ್ಮೇಳನದ ಉದ್ಘಾಟನೆಯನ್ನು ಸಕಲೇಶಪುರದ ಆರ್ಟಿಒ ಅಧಿಕಾರಿ ಮುಗಳವಳ್ಳಿ ಕೇಶವಧರಣಿ ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಿರಿಯ ದಲಿತ ಮುಖಂಡ ನಾರಾಯಣದಾಸ್, ಬಿ.ಪಿ.ಜಯರಾಂ, ಕೆ.ಈರಪ್ಪ, ನಿವೃತ್ತ ತಹಸೀಲ್ದಾರ್ ನಿರ್ವಾಣಯ್ಯ, ಪಿ. ಚನ್ನರಾಯಿ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ ಬೂಸಾ ಸಾಹಿತ್ಯಕ್ಕೆ ನಲವತ್ತು ವರ್ಷಗಳು, ದಲಿತ ಚಳುವಳಿ ಮತ್ತು ಮಹಿಳೆ ಮತ್ತಿತರ ವಿಷಯಗಳನ್ನು ಕುರಿತು ಚರ್ಚಾಗೋಷ್ಠಿಗಳು ನಡೆಯಲಿದೆ. ಈ ಸಮ್ಮೇಳನಕ್ಕೆ ತಾಲೂಕಿನ ದಲಿತ ವರ್ಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಮಾಡಿಕೊಡುವಂತೆ ಲಕ್ಷ್ಮಣ್ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಮುಖಂಡ ಸೋಮಶೇಖರ್, ಕುಮಾರ್ ಛಲವಾದಿ, ಚಿನ್ನಸ್ವಾಮಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

