ಹಾಸನ

'ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ'

Published On :

ಬೇಲೂರು: ರಾಜ್ಯಗಳ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ ್ಪಕ್ಷಕ್ಕೆ ಯಾವುದೆ ರೀತಿ ತೊಂದರೆಯಿಲ್ಲ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಶಾಸಕ ವೈ.ಎನ್. ರುದ್ರೇಶಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕದ ಅಧ್ಯಕ್ಷ ಹರಿಯಪ್ಪ ಅಯೋಜಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಸರ್ಕಾರಿ ಅಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು ವಿತರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದಿಲ್ಲಿ ಹೊರತು ಪಡಿಸಿದರೆ ಹಿಂದಿನ ಚುನಾವಣೆಯಲ್ಲೂ ಆಯಾ ರಾಜ್ಯಗಳಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿತ್ತು. ಅದರಂತೆ ಮತದಾರರು ಮತಚಲಾಯಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ಈ ಹಿಂದಿನ 10 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದೆ. ಮುಂದಿನ ಲೋಕಸಭೆ ಚುನವಣೆಯಲ್ಲಿ ಬಹುಮತದೊಂದಿಗೆ ಪುನಃ ಅಧಿಕಾರ ನೆಡೆಸಲಿದೆ ಎಂದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷವನ್ನು ಸದೃಢವಾಗಿ ನಡೆಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹಲವರು ಯೋಜನೆಗಳನ್ನು ರೂಪಿಸುವ ಮೂಲಕ ಜನಪರ ಆಡಳಿತ ನಡೆಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷ ಹರಿಯಪ್ಪ,ತಾಲೂಕು ಕಾಂಗ್ರೆಸ್ ಅಧ್ಯಕ್ಷ ವೈ.ಟಿ. ದಾಮೋದರ್, ಪುರಸಭೆ ಸದಸ್ಯರಾದ ಬಿ.ಎಲ್. ಧರ್ಮೇಗೌಡ, ಸತೀಶ್, ಮುಖಂಡರಾದ ದಾಸಪ್ಪ, ಸತ್ಯನಾರಾಯಣ, ವೈಧ್ಯಾಧಿಕಾರಿ ನರಸೇಗೌಡ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.