ಹಾಸನ

ಸ್ತ್ರೀಶಕ್ತಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Published On :

ಕ.ಪ್ರ.ವಾರ್ತೆ ,  ಹಾಸನ ,  ಡಿ. 13
ಕೇಂದ್ರ ಸರ್ಕಾರವು ಸ್ತ್ರೀ ಶಕ್ತಿ ಪುರಸ್ಕಾರ-2013 ಕುರಿತಂತೆ ಪ್ರಶಸ್ತಿಗಾಗಿ ಅರ್ಹ ಪ್ರಸ್ತಾವನೆಗಳನ್ನು ಈ ಕೆಳಕಂಡ ಪ್ರಶಸ್ತಿಗಳಿಗಾಗಿ ಆಹ್ವಾನಿಸಲಾಗಿದೆ.
ದೇವಿ ಅಹಲ್ಯಾಬಾಯಿ ಹೋಲ್ಕರ್, ಕನ್ನಗಿ, ಮಾತಾ ಜೀಜಾಬಾಯಿ, ರಾಣಿ ಗೈಡಿನ್ಲ್ಯೂ ಜಿಲಿಯಾಂಗ್, ರಾಣಿ ಲಕ್ಷ್ಮೀಬಾಯಿ, ರಾಣಿ ರುದ್ರಮ್ಮದೇವಿ, ಈ ಪ್ರಶಸ್ತಿಗಳನ್ನು ಮೊದಲ 4 ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವವರು ಸಂಕಷ್ಟದಲ್ಲಿರುವ ಮಹಿಳೆಯರು, ವಿಧವೆಯರು, ಅಪರಾಧಿಗಳು, ದೌರ್ಜನ್ಯಕ್ಕೊಳಪಟ್ಟವರು, ಅಂಗವಿಕಲರು, ಪರಿತ್ಯಕ್ತ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡವರು.  ಶಿಕ್ಷಣ ಮತ್ತು ತರಬೇತಿ ಸ್ವ- ಸಹಾಯ ಗುಂಪುಗಳನ್ನು ರಚಿಸಿದವರು, ಕೃಷಿ ಮತ್ತು ಗ್ರಾಮೀಣ ಉದ್ದಿಮೆಗಳಲ್ಲಿ ಹೊಸ ತಂತ್ರಜ್ಞಾನಗಳನ್ನು ರೂಪಿಸಲು ಸಹಕಾರಿಯಾಗಿರುವವರು, ಪರಿಸರ ರಕ್ಷಣೆ ಸಮುದಾಯ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರಿಗೆ ಪ್ರಶಸ್ತಿ ನೀಡಲಾಗುವುದು.
ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸುವವರು ವೈಯಕ್ತಿಕ ಹಾಗೂ ವ್ಯಾವಹಾರಿಕ ಜೀವನದಲ್ಲಿ ಸಂಕಷ್ಟ ಪರಿಸ್ಥಿತಿಗಳಲ್ಲಿ ಸಾಧನೆಯನ್ನು ಮಾಡಿರುವಂತಹ ಮಹಿಳೆಯರಿಗೆ ಪ್ರಶಸ್ತಿ ನೀಡಲಾಗುವುದು.
ಸಂಬಂಧಪಟ್ಟವರು 2013ನೇ ಸಾಲಿನ ಪ್ರಶಸ್ತಿಗಾಗಿ ಅರ್ಹ ಪ್ರಸ್ತಾವನೆಗಳನ್ನು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ನಿರ್ದಿಷ್ಟ ಪಡಿಸಿದ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಾಸನ ಇವರಿಂದ ಪಡೆಯುವುದು. ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಡಿ. 16ರೊಳಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 9ನೇ ಅಡ್ಡರಸ್ತೆ, ಕೆ.ಆರ್. ಪುರಂ, ಹಾಸನ ಇವರಿಗೆ ಸಲ್ಲಿಸಬೇಕು.
ನಿಗದಿತ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 267218ನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಕೋರಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.