ಹಾಸನ

ಅಕ್ರಮ ಮರಳು ಲಾರಿ ಸಂಚಾರ ತಡೆಗೆ ಆಗ್ರಹ

Published On :

ಕ.ಪ್ರ.ವಾರ್ತೆ ,  ಸಕಲೇಶಪುರ ,   ಡಿ.12
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿರುವ ಅಕ್ರಮ ಮರಳು ಲಾರಿಗಳ ಸಂಚಾರವನ್ನು ಅಧಿಕಾರಿಗಳು ತಡೆಯದಿದ್ದರೆ ಮುಂದಿನ ದಿನಗಳಲ್ಲಿ  ಶಿರಾಡಿ ಉಳಿಸಿ ಹೋರಾಟ ಸಮಿತಿಯೇ ಈ ಕಾರ್ಯ ನಡೆಸಲಿದೆ ಎಂದು ಸಮಿತಿಯ ಅಧ್ಯಕ್ಷ ಸಂಜೀತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.
ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯಲ್ಲಿ ಮರಳುಗಾರಿಕೆಗೆ ನೀಡಲಾಗುವ ಪರವನಾಗಿ ಪಡೆದು ಮಂಗಳೂರಿನಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನೂರಾರು ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ.  ಇದರಿಂದಾಗಿ ಶಿರಾಡಿ ಘಾಟ್ ರಸ್ತೆ ದುಸ್ಥಿತಿಗೆ ಈಡಾಗಿದೆ ಎಂದರು.
ಈ ಬಗ್ಗೆ ಪ್ರತಿಭಟನೆ ನಡೆಸಿದ್ದರ ಫಲವಾಗಿ  ಸರ್ಕಾರ ರು. 4.40 ಲಕ್ಷ ವೆಚ್ಚದಲ್ಲಿ ಹೆದ್ದಾರಿ ಗುಂಡಿಮುಚ್ಚುವ ಕಾರ್ಯ ಕೈಗೆತ್ತಿಕೊಂಡಿದೆ. ಆದರೆ, ಮರಳು ತುಂಬಿರುವ ಲಾರಿಗಳು ಗುಂಡಿಮುಚ್ಚಿರುವ ರಸ್ತೆಯಲ್ಲಿ ಅಧಿಕ ಭಾರದ ಹಸಿಮರಳು ತುಂಬಿಕೊಂಡು ಸಾಗುತ್ತಿರುವುದರಿಂದ ಕಾಮಗಾರಿ ಅಸಾಧ್ಯವಾಗಿದೆ. ಇದರಿಂದಾಗಿ ಗುಂಡಿ ಮುಚ್ಚುವ ಕಾಮಗಾರಿ ಕೈಗೆತ್ತಿಕೊಂಡಿರುವ ಗುತ್ತಿಗೆದಾರರು ಕಾಮಗಾರಿ ನಿಲ್ಲಿಸುವ ಬೆದರಿಕೆ ಒಡ್ಡಿದ್ದಾರೆ. ಆದ್ದರಿಂದ, ಕಾಮಗಾರಿ ಮುಕ್ತಾಯವಾಗುವವರೆಗೆ ಮರಳು ಲಾರಿಗಳ ಸಂಚಾರವನ್ನು ನಿಷೇಧಿಸಬೇಕು. ತಪ್ಪಿದಲ್ಲಿ ಮರಳು ಲಾರಿಗಳನ್ನು ತಡೆಹಿಡಿಯುವ ಕೆಲಸವನ್ನು ಸಮಿತಿಯೇ ಕೈಗೆತ್ತಿಕೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಸಾ.ಸು. ವಿಶ್ವನಾಥ್, ಚನ್ನವೇಣಿ ಎಂ ಶೆಟ್ಟಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.