'ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಿ'
ಹೊಳೆನರಸೀಪುರ: ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಕೃಷಿಯನ್ನು ಲಾಭದಾಯಕವಾಗಿ ಮಾಡಲು ರೈತರು ಆಧುನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಎನ್. ದೇವೇಗೌಡ (ಪಾಪಣ್ಣಿ) ಕರೆ ನೀಡಿದ್ದಾರೆ. ಅವರು ಇತ್ತೀಚೆಗೆ ತಾಲ್ಲೂಕಿನ ಕಸಬ ಹೋಬಳಿಯ ಮಾರನಾಯಕನಹಳ್ಳಿ ಗ್ರಾಮದಲ್ಲಿ ಕೃಷಿ ಇಲಾಖೆ ವತಿಯಿಂದ ಸುರಕ್ಷಿತ ಕೀಟನಾಶಕಗಳ ಬಳಕೆ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡುವುದರಿಂದ ಹೆಚ್ಚಿನ ಉತ್ಪಾದಕತೆಯೊಂದಿಗೆ ಪರಿಸರ ಮಾಲಿನ್ಯ ತಡೆಯಬಹುದೆಂದು ಹೇಳಿದ ಅವರು ತಜ್ಞರು ತರಬೇತಿಯಲ್ಲಿ ತಿಳಿಸುವ ಮಾಹಿತಿಯನ್ನು ತಮ್ಮ ಜಮೀನಿನಲ್ಲಿ ಅಳವಡಿಸಿಕೊಳ್ಳುವಂತೆ ರೈತರಿಗೆ ತಿಳಿಸಿದರು.
ವಿವರಣೆ: ಕಂದಲಿಯ ಕೃಷಿ ವಿಜ್ಞಾನ ಕೇಂದ್ರದಿಂದ ಆಗಮಿಸಿದ್ದ ಕೇಂದ್ರದ ಮುಖ್ಯಸ್ಥ ಹಾಗೂ ಕೀಟ ತಜ್ಞ ಡಾ. ಬಸವರಾಜು ಮಾತನಾಡಿ, ನಾನಾ ಬೆಳೆಗಳಲ್ಲಿ ಕಂಡುಬರುವ ಕೀಟ, ರೋಗಗಳು ಹಾಗೂ ಅವುಗಳ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರಲ್ಲದೇ, ಕೀಟನಾಶಕಗಳ ತೀವ್ರತೆಯನ್ನು ಗುರುತಿಸುವ ಬಗ್ಗೆ ಮತ್ತು ಬಳಸುವ ಸಮಯದಲ್ಲಿ ರೈತರು ತೆಗೆದುಕೊಳ್ಳಬೇಕಾದ ಜಾಗೃತಿ ಕ್ರಮಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಡಾ. ಭಾನುಪ್ರಕಾಶ್, ತಾಲೂಕು ಪಂಚಾಯ್ತಿ ಅಧ್ಯಕ್ಷ ಪುಷ್ಪಗೌಡೇಗೌಡ ಅವರು ತರಬೇತಿಯಿಂದ ಪಡೆದ ಮಾಹಿತಿಯನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು. ಉಪಾಧ್ಯಕ್ಷ ಹೆಚ್.ಬಿ.ನಂಜುಂಡಪ್ಪ ಮಾತನಾಡಿ, ರೈತರಿಗೆ ಉಪಯುಕ್ತವಾದ ಯೋಜನೆಗಳಿದ್ದು ಅವುಗಳನ್ನು ಉಪಯೋಗಿಸಿಕೊಂಡು ರೈತರು ತಮ್ಮ ಆರ್ಥಿಕ ಮಟ್ಟವನ್ನು ಸುಧಾರಿಸಿಕೊಳ್ಳಲು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

