ರನ್ ಫಾರ್ ಯೂನಿಟಿ ಓಟಕ್ಕೆ ಚಾಲನೆ
ಹಾಸನ: ಗುಜರಾತಿನಲ್ಲಿ ನಿರ್ಮಿಸುವಂತಹ ವಿಶ್ವದಲ್ಲೇ ಅತೀ ದೊಡ್ಡದಾದ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪ್ರತಿಮೆಯ ಅಂಗವಾಗಿ ಭಾನುವಾರ ದೇಶಾದ್ಯಂತ ರನ್ ಫಾರ್ ಯೂನಿಟಿ ಓಟ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಸಹ ಓಟ ನಡೆಯಿತು.
ನಗರದ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಬೆಳಿಗ್ಗೆ ರನ್ ಫಾರ್ ಯೂನಿಟಿ ಓಟವನ್ನು ಹಿರಿಯ ಕ್ರೀಡಾಪಟು ಎ.ಎಸ್. ಬಾಲಸುಬ್ರಮಣ್ಯ ಬಾವುಟ ತೋರಿಸುವ ಮೂಲಕ ಓಟಕ್ಕೆ ಚಾಲನೆ ನೀಡಿದರು.
.ರನ್ಫಾರ್ಯೂನಿಟಿ ಓಟವು ನಗರದ ಹೈಸ್ಕೂಲ್ ಮೈದಾನದಿಂದ ಪ್ರಾರಂಭವಾಗಿ ಎವಿಕೆ ಕಾಲೇಜು ಮುಖಾಂತರ ಹೇಮಾವತಿ ಪ್ರತಿಮೆ, ಎನ್.ಆರ್. ವೃತ್ತ, ಬಿ.ಎಂ. ರಸ್ತೆ, ಶಂಕರಿಮಠ ರಸ್ತೆ, ಎಂ.ಜಿ. ರಸ್ತೆ, ಮಹಾವೀರಭವನದ ಮುಖಾಂತರ ರಾಮಕೃಷ್ಣ ವಿದ್ಯಾಲಯದಲ್ಲಿ ಕೊನೆಯಾಯಿತು. ಈ ಸಂದರ್ಭದಲ್ಲಿ ನರೇಂದ್ರ ಅಭಿಮಾನಿ ಸಂಘದ ರಾಜ್ಯಾಧ್ಯಕ್ಷರು ಸಿ.ಎಸ್. ಕೃಷ್ಣಸ್ವಾಮಿ, ಕಾರ್ಯಾಧ್ಯಕ್ಷ ಬಿ.ಕೆ. ಮಂಜುನಾಥ್, ಸ್ಟಾಚ್ಯು ಆಫ್ ಯೂನಿಟಿ ಹಾಗೂ ಲೋಹ ಸಂಗ್ರಹ ಸಹಕಾರ ಸಮಿತಿ ಜಿಲ್ಲಾ ಸಂಚಾಲಕ ಅಮಿತ್ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ, ಮುಖಂಡ ವೇಣುಕುಮಾರ್, ಸ್ಟಾಚ್ಯು ಆಫ್ ಯೂನಿಟಿ ಸಹ ಸಂಚಾಲಕ ವಿಜಯಕುಮಾರ್, ಅಭಿನಾಶ್, ಬಿಜೆಪಿ ಮಾಜಿ ಜಿಲಾಧ್ಯಕ್ಷ ಎಂ.ಎಸ್. ಕೃಷ್ಣೇಗೌಡ, ಮನೋಹರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚನ್ನಕೇಶವ, ಕಾರ್ಯದರ್ಶಿ ನಾಗೇಶ್, ಗುರುಪ್ರಸಾದ್ ಹಾಗೂ ಇತರರು ಇದ್ದರು.
15ಎಚ್ಎಸ್ಎನ್ 23 ಪಿ
ರನ್ಫಾರ್ಯೂನಿಟಿ ಓಟ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

