ದತ್ತ ಪೀಠಕ್ಕೆ ತೆರಳುತ್ತಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ
ಕ.ಪ್ರ.ವಾರ್ತ್ಣೆ ಬೇಲೂರು , ಡಿ 16
ಎರಡು ಕೋಮುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದರಿಂದ ಪಟ್ಟಣದಲ್ಲಿ ಸೋಮವಾರ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸಕಾಲಕ್ಕೆ ಆಗಮಿಸಿದ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ನಾನಾ ಹಿಂದೂ ಸಂಘಟನೆಯ ಕಾರ್ಯಕರ್ತರು ದತ್ತಮಾಲೆ ಧರಿಸಿಕೊಂಡು ವಿವಿಧೆಡೆಯಿಂದ ಪಟ್ಟಣಕ್ಕೆ ಆಗಮಿಸಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ಜಿ.ಕೆ.ಹೊಟೇಲ್ ಮುಂಭಾಗದ ಮೀನು ಮಾರುಕಟ್ಟೆ ಬಳಿ ಬಂದಾಗ ಒಂದು ಕೋಮಿನ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಲಾಗುತ್ತಿದೆ ಎಂದು ಕೆಲವು ಯುವಕರು ಮಾತಿಗಿಳಿದರು.
ಈ ಸಂದರ್ಭದಲ್ಲಿ ಕಿಡಿಗೇಡಿಗಳಿಂದ ಕಲ್ಲು ಎಸೆಯಲ್ಪಟ್ಟಿತು. ಇದರಿಂದ ಗೊಂದಲಕ್ಕೆ ಒಳಗಾದ ಎರಡೂ ಕೋಮಿನವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ವೃತ್ತನಿರೀಕ್ಷಕ ಗಣೇಶ ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ತಹಬದಿಗೆ ತಂದರು. ಈ ಸಂದರ್ಭ ಮುಸ್ಲಿಂ ಮುಖಂಡರಾದ ಟಿಪ್ಪು ಯುವಕ ಸಂಘದ ಜಾಕೀರ್, ಭಾರತ್ ಪೆಟ್ರೋಲ್ ಬಂಕ್ ಮಾಲೀಕ ತೌಫಿಕ್ ಅಬ್ದುಲ್ ಸಮದ್ ಮಾತನಾಡಿ, ಪ್ರತಿ ವರ್ಷವೂ ದತ್ತಮಾಲೆಯ ಮೆರವಣಿಗೆ ನಡೆಯುತ್ತಿದ್ದು ಯಾವುದೇ ಅಹಿತಕರ ಘಟನೆ ನಡೆದಿರಲಿಲ್ಲ. ತಾಲೂಕಿನಲ್ಲಿ ಹಿಂದೂ ಮುಸ್ಲಿಂ ಮತದವರು ಅಣ್ಣ ತಮ್ಮಂದಿರಂತೆ ಇದ್ದು ಇದನ್ನು ಹಾಳುಗೆಡವಲು ಕೆಲವರು ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಕಾರ್ಯಕರ್ತರಿಂದ ಮೆರವಣಿಗೆ
ಬೇಲೂರು: ದತ್ತಪೀಠಕ್ಕೆ ತೆರಳುವ ಮುನ್ನ ಪಟ್ಟಣದ ಮುಖ್ಯರಸ್ತೆಯಲ್ಲಿ ಸೋಮವಾರ ಭಜರಂಗದಳ, ಆರ್ಎಸ್ ಎಸ್, ಓಂ ನಮೋ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಹಾಸನ, ಸಕಲೇಶಪುರ, ಉಪ್ಪಿನಗಂಡಿ, ಅರೇಹಳ್ಳಿ, ಲಿಂಗಾಪುರ, ಬಿಕ್ಕೋಡಿನಿಂದ ದತ್ತಮಾಲೆ ಧರಿಸಿಕೊಂಡು ಬಂದಿದ್ದ ಕಾರ್ಯಕರ್ತರು ಇಲ್ಲಿನ ಶ್ರೀ ಚನ್ನಕೇಶವಸ್ವಾಮಿ ದೇಗುಲದಿಂದ ಹೊರಟು ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿ ನಂತರ ದತ್ತಪೀಠಕ್ಕೆ ತೆರಳಿದರು.
ತಾಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಕೃಷ್ಣೇಗೌಡ, ತಾಲೂಕು ಬಿಜೆಪಿ ಕಾರ್ಯದರ್ಶಿ ಬೆಣ್ಣೂರು ಪೂರ್ಣೇಶ್ ಮಾತನಾಡಿ, ಈ ಬಾರಿ ಅತಿ ಹೆಚ್ಚು ಕಾರ್ಯಕರ್ತರು ದತ್ತಮಾಲೆ ಧರಿಸಿದ್ದು ತಾಲೂಕು ಅಲ್ಲದೆ ಬೇರೆಡೆಯಿಂದ ಪಟ್ಟಣಕ್ಕೆ ಆಗಮಿಸಿ ಇಲ್ಲಿಂದ ಒಟ್ಟಾಗಿ ಮೆರವಣಿಗೆ ನಡೆಸಿದ್ದು ದತ್ತಪೀಠಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

