ಏಡ್ಸ್ಗೆ ಮುಂಜಾಗರೂಕತೆಯೇ ಉತ್ತಮ ಚಿಕಿತ್ಸೆ: ತಿಮ್ಮಯ್ಯ
ಆಲೂರು: ಏಡ್ಸ್ ಒಂದು ಮಾರಣಾಂತಿಕ ಕಾಯಿಲೆ. ಚಿಕಿತ್ಸೆಗಿಂತ ಮುಖ್ಯವಾಗಿ ಕಾಯಿಲೆ ಬಾರದಂತೆ ಎಚ್ಚರಿಕೆ ವಹಿಸುವುದೇ ಬಚಾವಾಗುವ ಮಾರ್ಗವೆಂದು ತಾಲೂಕು ಆರೋಗ್ಯಾಧಿಕಾರಿ ಎಚ್.ಆರ್.ತಿಮ್ಮಯ್ಯ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಹಾಗೂ ಎನ್ಎಸ್ಎಸ್ ಘಟಕದ ಸಹಯೋಗದಲ್ಲಿ ಏಡ್ಸ್ ನಿಯಂತ್ರಣ ಮತ್ತು ರಕ್ತದಾನದ ಮಹತ್ವ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸೋಂಕಾದ ವ್ಯಕ್ತಿಯ ದೇಹದ ರಕ್ಷಣಾ ವ್ಯವಸ್ಥೆ ಹದಗೆಡುವ ಕಾರಣ ಇಂತಹ ವ್ಯಕ್ತಿ ಸುಲಭವಾಗಿ ಯಾವ ರೋಗಕ್ಕೆ ಬೇಕಾದರೂ ತುತ್ತಾಗಬಲ್ಲ. ಎಚ್ಐವಿ ರೋಗಿಗಳಲ್ಲಿ ಭಾರತ 2ನೇ ಸ್ಥಾನದಲ್ಲಿರುವುದು ಆತಂಕಕಾರಿ ವಿಷಯ ಎಂದರು.
ಕಾಲೇಜಿನ ಪ್ರಾಂಶುಪಾಲ ಯು.ಎ.ವೆಂಕಟರಾಮು ಮಾತನಾಡಿ, ರಕ್ತದಾನ ಜೀವನ್ಮರಣದ ಮಧ್ಯೆ ಹೋರಾಡುತ್ತಿರುವ ವ್ಯಕ್ತಿಯ ಜೀವ ಉಳಿಸುತ್ತದೆ ಎಂದರು. ಪ್ರಬಂಧ ಸ್ಪರ್ಧೆ ಹಾಗೂ ಭಾಷಣದಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪ ಪ್ರಾಂಶುಪಾಲ ಕೃಷ್ಣಪ್ಪ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ತಮ್ಮಯ್ಯ, ಕಸಾಪ ಅಧ್ಯಕ್ಷ ಗುಲಾಂ ಸತ್ತಾರ್, ಪತ್ರಕರ್ತರ ಸಂಘದ ಅಧ್ಯಕ್ಷ ರಾಘು ಹಾಗೂ ಉಪನ್ಯಾಸಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

