ಲೋಕಸಭಾ ಚುನಾವಣೆಗೆ ಸಜ್ಜಾಗಲು ಕರೆ
ಹಾಸನ: ದೇಶಾದ್ಯಂತ ಮೋದಿ ಅಲೆ ಹಬ್ಬಿದ್ದು, ಲೋಕಸಭಾ ಚುನಾವಣೆಗೆ ಪಕ್ಷ ಸಂಘಟಿಸುವಂತೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಜಿಲ್ಲಾ ಕಾರ್ಯಕಾರಣಿ ಸಭೆ ಉದ್ಘಾಟಿಸಿ ಮಾತನಾಡಿ, ದೇಶದ ಭವಿಷ್ಯದ ಹಿತದೃಷ್ಟಿಯಿಂದ ಜನತೆ ಉತ್ತಮ ಜನಪ್ರತಿನಿಧಿಯ ಆಯ್ಕೆ ಮಾಡುವ ಅವಶ್ಯಕತೆ ಇದೆ. ಜಿಲ್ಲೆಯೊಳಗೆ ಹೊಸ ಗಾಳಿ ಹಬ್ಬಿದ್ದು, ಪಕ್ಷ ಶಕ್ತಿಯುತವಾಗಿ ಸಂಘಟನೆಗೊಳ್ಳುತ್ತಿದೆ ಎಂದರು.
ಹಿಂದೆ ಬಿ.ಬಿ.ಶಿವಪ್ಪ, ಹನುಮೇಗೌಡ, ಅರಸೀಕೆರೆಯ ಬಸವರಾಜು ಶಾಸಕರಾಗಿ ಅನೇಕ ಜನಪರ ಕೆಲಸ ಮಾಡಿ ಪಕ್ಷ ಸಂಘಟಿಸಿದ್ದಾರೆ. ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಎಲ್ಲ ವರ್ಗದ ಜನರನ್ನು ಗಣನೆಗೆ ತೆಗೆದುಕೊಂಡು ಕೆಲಸ ನಿರ್ವಹಿಸಿದ್ದಾರೆ ಎಂದರು. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಕಡೆ ಜನತೆ ಒಲವು ತೋರಿದ್ದಾರೆ. ನರೇಂದ್ರ ಮೋದಿಯ ಆಡಳಿತಕ್ಕಾಗಿ ದೇಶದ ಜನತೆ ಕಾಯುತ್ತಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಸಾರ್ವಜನಿಕರು ಹಾಗೂ ಕಾರ್ಯಕರ್ತರು 10 ನೀಡಿ ಭಾಗವಹಿಸಿದ್ದರು. ಮೋದಿ ಎನ್ನುವ ಧ್ವನಿ ಇಡೀ ಸಮಾವೇಶದಲ್ಲಿ ಕೇಳಿ ಬಂದಿತು. ಕಾಂಗ್ರೆಸ್ ಸರ್ಕಾರದ 1ಕ್ಕೆ 1 ಕೆಜಿಯಂತೆ 30 ಕೆಜಿ ಅಕ್ಕಿ ಹಾಗೂ ಶಾದಿಭಾಗ್ಯ ಯೋಜನೆ ಕಾಂಗ್ರೆಸ್ ಶಾಸಕರಿಗೇ ಪ್ರಶ್ನೆಯಾಗಿ ಪರಿಣಮಿಸಿದೆ ಎಂದು ಲೇವಡಿ ಮಾಡಿದರು. ಕೇಂದ್ರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಸಾಕಷ್ಟು ಹಗರಣಗಳು ನಡೆದಿದ್ದು, ಇದರಿಂದ ನಾಡಿನ ಜನತೆ ಬೇಸತ್ತಿದ್ದಾರೆ. ಪ್ರಧಾನಿ ಮನಮೋಹನ್ ಸಿಂಗ್ ಅವರು ಉತ್ಸವ ಮೂರ್ತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ದೇಶದ ಹಿತದೃಷ್ಟಿಯಿಂದ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದ್ದು, ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಪರ್ವತಯ್ಯ, ಜಿಲ್ಲಾ ಎಸ್ಸಿ ಮೋರ್ಚಾ ಪ್ರಭಾರಿ ಉಪಾಧ್ಯಕ್ಷ ಬಾಸ್ಕರ್ರಾವ್, ಬಿಜೆಪಿ ಜಿಲ್ಲಾಧ್ಯಕ್ಷ ರೇಣುಕುಮಾರ್, ಮಾಜಿ ಅಧ್ಯಕ್ಷ ಎಂ.ಎಸ್.ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ಬಾಲು, ಪ್ರೀತಮ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

