ಹಾಸನ

ಇಂದು ಬ್ಯಾಂಕ್ ನೌಕರರ ಮುಷ್ಕರ

Published On :

ಕ.ಪ್ರ.ವಾರ್ತೆ ಹಾಸನ ಡಿ. 17
ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಲ್ಲ ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕ್‌ಗಳ ಅಧಿಕಾರಿಗಳು, ನೌಕರರು ಡಿ.18ರಂದು ಒಂದು ದಿನದ ಸಾಂಕೇತಿಕ ಮುಷ್ಕರ ನಡೆಸಲಿದ್ದಾರೆ ಎಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘಟನೆ ಸಂಚಾಲಕ ಹೆಚ್.ಎನ್. ಪರಮಶಿವಯ್ಯ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಹಣ: ಕೇಂದ್ರ ಸರ್ಕಾರವು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿರುವ ತನ್ನ ಷೇರು ಬಂಡವಾಳವನ್ನು ಶೇ. 50ಕ್ಕಿಂತ ಕಡಿಮೆಗೊಳಿಸಿ ಖಾಸಗಿ ಒಡೆತನಕ್ಕೆ ನೀಡುವ ಉದ್ದೇಶದ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ಕಳೆದ ಡಿ.5ರಂದು ಬೇಡಿಕೆ ದಿನ ಆಚರಿಸಿದ್ದು, ಸರ್ಕಾರಕ್ಕೆ ತನ್ನ ಜವಾಬ್ದಾರಿಯ ಅರಿವು ಮೂಡಿಸಿದ್ದಲ್ಲದೆ ಸಾರ್ವಜನಿಕರ ಹಣ ಜನರಿಗೆ ಸಲ್ಲಬೇಕು. ಬಂಡವಾಳ ಶಾಹಿಗಳಿಗೆ ಲಾಭವಾಗಬಾರದು ಎಂಬ ಸಂದೇಶವನ್ನು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಒಂದು ಕೋಟಿಗೂ ಮೇಲ್ಪಟ್ಟು ಬಾಕಿ ಇರುವ ಗ್ರಾಹಕರ ಹೆಸರನ್ನು ಬಹಿರಂಗ ಪಡಿಸಬೇಕು. ಬ್ಯಾಂಕ್ ಸಾಲ ಮರುಪಾವತಿಸುವ ಶಕ್ತಿಯಿದ್ದರೂ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರನ್ನು ಕ್ರಿಮಿನಲ್ ಕಾಯ್ದೆಯಡಿಗೆ ಒಳಪಡಿಸಬೇಕು. ಸಾಲ ವಸೂಲಿಗಾಗಿ ತ್ವರಿತ ಹಾಗೂ ಶಿಸ್ತಿನ ರೀತಿಯಲ್ಲಿ ಕಾನೂನು ಜಾರಿಗೊಳಿಸಬೇಕು ಮೊದಲಾದ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.
2007 ರಿಂದ 2012ರವರೆಗೆ ವೇತನ ಪರಿಷ್ಕರಣೆ ಮಾಡದೆ ಒಂದು ವರ್ಷವಾದರೂ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಳ್ಳದೆ ಬ್ಯಾಂಕ್ ನೌಕರರ ಹಿತ ಚಿಂತನೆ ಮರೆತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.