ಹಾಸನ

ಮೈಸೂರು ವಿವಿ ಪರೀಕ್ಷೆ ಮರು ನಿಗದಿ

Published On :

ಮೈಸೂರು: ಡಿ.11 ಮತ್ತು 12 ರಂದು ನಡೆಯಬೇಕಿದ್ದ ಮೈಸೂರು ವಿವಿ ಪರೀಕ್ಷೆಗಳನ್ನು ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಈ ಪರೀಕ್ಷೆಗಳನ್ನು ನಡೆಸುವ ದಿನಾಂಕಗಳನ್ನು ಈ ಕೆಳಕಂಡಂತೆ ನಿಗದಿಪಡಿಸಿದೆ ಎಂದು ಮೈಸೂರು ವಿವಿ ಕುಲಸಚಿವ (ಪರೀಕ್ಷಾಂಗ) ಹೇಳಿದ್ದಾರೆ. ಡಿ.11 ರಂದು ನಡೆಯಬೇಕಿದ್ದ ಪರೀಕ್ಷೆಯು ಡಿ.22 ರಂದು ಹಾಗೂ ಡಿ.12 ರಂದು ನಡೆಯಬೇಕಿದ್ದ ಪರೀಕ್ಷೆಯು 2014ರ ಜ.12 ರಂದು ನಡೆಯಲಿದೆ. ಪರೀಕ್ಷೆ ವೇಳೆಯಲ್ಲಿ ಯಾವುದೆ ಬದಲಾವಣೆ ಇಲ್ಲ. 2014ರ ಜ.15 ರಂದು ನಿಗದಿಪಡಿಸಲಾಗಿದ್ದ ಪದವಿ ಪರೀಕ್ಷೆಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮುಂದೂಡಲಾಗಿದೆ. ಆ ಪರೀಕ್ಷೆಯನ್ನು ಜ.18 ರಂದು ನಡೆಸಲಾಗುವುದು. ಪರೀಕ್ಷಾ ವೇಳೆಯಲ್ಲಿ ಯಾವುದೆ ಬದಲಾವಣೆ ಇರುವುದಿಲ್ಲ.

ಹನುಮ ಜಯಂತಿ ಪೂಜೆ
ಹೊಳೆನರಸೀಪುರ:
ಪಟ್ಟಣದ ಎದುರು ಮುಖ ಅಂಜನೇಯ ದೇವಾಲದಲ್ಲಿ ಇತ್ತೀಚೆಗೆ ಹನುಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ಹೋಮ ಹವನಗಳನ್ನು ಆಯೋಜಿಸಿ ಭಕ್ತಿಯಿಂದ ಆಚರಿಸಿದರು.  ಹನುಮ ಜಯಂತಿ ಪ್ರಯುಕ್ತ ರಾತ್ರಿ ಅಂಜನೇಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಿಲ್ಲಿ ಕುರುಹಿನಶೆಟ್ಟಿ ಸಮಾಜದ ನೂರಾರು ಭಕ್ತರು ಭಾಗವಹಿಸಿದ್ದರು. ಮೆರವಣಿಗೆ ನಂತರ ದೇವಾಲಯದಲ್ಲಿ ಮಹಾ ಮಂಗಳಾರತಿ ನಡೆಯಿತು.

ಕೃಷಿ ತಂತ್ರಜ್ಞಾನ ಸಪ್ತಾಹ
ಹಾಸನ:
ಕಂದಲಿಯ ಕೃಷಿ ವಿಜ್ಞಾನ ಕೇಂದ್ರ, ಕಾರೆರೆ ಕೃಷಿ ಮಹಾವಿದ್ಯಾಲಯ ಕಾರೆಕೆರೆ, ಮಡೆನೂರಿನ ಜೈವಿಕ ಇಂಧನ ಉದ್ಯಾನ, ಕೃಷಿ ಸಂಶೋಧನಾ ಕೇಂದ್ರ, ಕೃಷಿ, ತೋಟಗಾರಿಕೆ, ರೇಷ್ಮೆ ಕೃಷಿ, ಪಶು ಸಂಗೋಪನೆ, ಮೀನುಗಾರಿಕೆ, ಜಲಾನಯನ ಅಭಿವೃದ್ಧಿ ಇಲಾಖೆ, ಆಶ್ರಯದಲ್ಲಿ ಕೃಷಿ ತಂತ್ರಜ್ಞಾನ ಸಪ್ತಾಹ- 2013 ಏರ್ಪಡಿಸಲಾಗಿದೆ. ಡಿ. 18ರಂದು ಬೆಳಗ್ಗೆ 10ಕ್ಕೆ ಮಡೆನೂರಿನ ಜೈವಿಕ ಇಂಧನ ಉದ್ಯಾನದಲ್ಲಿ ಜೈವಿಕ ಇಂಧನ ತಂತ್ರಜ್ಞಾನ  ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ಡಿ. 19ರಂದು  ಕಂದಲಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ  ತೋಟಗಾರಿಕೆ ಬೆಳೆಗಳ ಅಭಿವೃದ್ಧಿ ತಂತ್ರಜ್ಞಾನಗಳು ಕುರಿತು ವಿಚಾರ ಸಂಕಿರಣ ನಡೆಯಲಿದೆ. ಡಿ. 20ರಂದು ಕಂದಲಿಯ  ಕೃಷಿ ವಿಜ್ಞಾನ ಕೇಂದ್ರದಲ್ಲಿ  ಬೆಳಗ್ಗೆ 10ಕ್ಕೆ  ಕೃಷಿಯಲ್ಲಿ ಯಾಂತ್ರೀಕರಣ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ. ರೈತರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಂತ್ರಿಕ ಮಾಹಿತಿ ಪಡೆದುಕೊಳ್ಳಲು  ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮತ್ತು ಸಿಬ್ಬಂದಿ ವರ್ಗದವರು ಕೋರಿದ್ದಾರೆ.

ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೇಲೂರು:
ಪಟ್ಟಣದ ಯುನೈಟೆಡ್ ಶಾಲೆಯಲ್ಲಿ ನಡೆದ ತಾಲೂಕು ಕಿರಿಯ ಪ್ರಾಥಮಿಕ ಪಾಠ ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ರೋಟರಿ ವಿದ್ಯಾ ಸಂಸ್ಥೆಯ 4ನೇ ತರಗತಿ ವಿದ್ಯಾರ್ಥಿ ಎ.ಎಸ್. ಸಾತ್ವಿಕ್ ಸಂಸ್ಕೃತಿ, ಕಂಠಪಾಠ ಹಾಗೂ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಗೌರವ ತರಲಿ ಎಂದು ಶಾಲೆಯ ಶಿಕ್ಷಕರು ಹಾಗೂ ಪೋಷಕರು ಹಾರೈಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.