ಹಾಸನ

ಶಾಸ್ತ್ರೀಯ ಪರಿಕರಗಳಿಂದ ಅರ್ಥಶಾಸ್ತ್ರ ನಿಖರತೆ

Published On :

ಹೊಳೆನರಸೀಪುರ: ಅರ್ಥಶಾಸ್ತ್ರದಲ್ಲಿ ಗಣಿತೀಯ ಮತ್ತು ಸಂಖ್ಯಾಶಾಸ್ತ್ರೀಯ ಪರಿಕರಗಳನ್ನು ಬಳಸಿ ಅರ್ಥಶಾಸ್ತ್ರದ ಸಿದ್ಧಾಂತಗಳನ್ನು ಮತ್ತು ನಿಯಮಗಳನ್ನು ವಿವರಿಸುವುದರಿಂದ ಅರ್ಥಶಾಸ್ತ್ರದ ವಿಷಯಗಳು ಹೆಚ್ಚು ನಿಖರತೆ ಹಾಗೂ ಸ್ಪಷ್ಟತೆಯನ್ನು ಗಳಿಸಲು ಸಾಧ್ಯವಾಗುತ್ತದೆ ಎಂದು ಹಾಸನದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪ್ರೊ. ಕೆ.ಡಿ. ಮುರಳೀಧರ್ ತಿಳಿಸಿದರು.
ಪಟ್ಟಣದಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಅರ್ಥಶಾಸ್ತ್ರಜ್ಞರಿಗಾಗಿ ಗಣಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದ ಅನ್ವಯತೆ ಎಂಬ ವಿಷಯದ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರ್ಥಶಾಸ್ತ್ರದಲ್ಲಿ ಗಣಿತ ಹಾಗೂ ಸಂಖ್ಯಾಶಾಸ್ತ್ರವನ್ನು ಬಳಸುವುದರಿಂದಾಗಿ ಆರ್ಥಿಕ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದರು.
ಇಂದಿನ ಬಹುತೇಕ ಅರ್ಥಶಾಸ್ತ್ರದಲ್ಲಿ ನೋಬೆಲ್ ಪುರಸ್ಕೃತರು ಗಣಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರದಲ್ಲಿ ಸಾಧನೆ ಮಾಡಿದವರಾಗಿದ್ದು, ಇವರುಗಳು ವಾಸ್ತವಿಕತೆಗೆ ಹತ್ತಿರದ ವಿಷಯಗಳನ್ನು ವಿವರಿಸಿ ರಾಷ್ಟ್ರಗಳು ಅಭಿವೃದ್ಧಿ ಸಾಧಿಸಲು, ಸಮಸ್ಯೆಗಳನ್ನು ಬಗೆಹರಿಸಲು ಸಲಹೆ ಸೂಚನೆಗಳನ್ನು ನೀಡಿದವರಾಗಿದ್ದಾರೆ ಎಂದು ಹೇಳಿದ ಪ್ರೊ. ಮುರಳೀಧರ್ ಅವರು, ಗ್ರಾಮೀಣ ಪ್ರದೇಶದ ಪ್ರತಿಭೆಗಳು ಅಧ್ಯಯನದ ವಿಷಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಂಡು, ಸ್ಪರ್ಧಾತ್ಮಕ ಜಗತ್ತಿನ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಸಿದ್ಧಗೊಳ್ಳುವಂತೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗಾಗಿ ಮಾತ್ರವೇ ಸೀಮಿತವಾಗದೇ, ಸಕಾರಾತ್ಮಕವಾದ ಮೌಲ್ಯಯುತ ಶಿಕ್ಷಣ ಪಡೆಯಲು ಮುಂದಾಗುವಂತೆ ಕರೆ ನೀಡಿದರು.
ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಪ್ರೊ. ಚಂದ್ರಕುಮಾರ್ ಅಧ್ಯಕ್ಷತೆ  ವಹಿಸಿದ್ದರು. ಸ್ನಾತಕೋತ್ತರ ಅಧ್ಯಯನ ಕೇಂದ್ರ ಮುಖ್ಯಸ್ಥರಾದ ಪ್ರೊ. ಜಿ.ಜಿ.ರಾಜಶೇಖರ್ ಇದ್ದರು. ರಶ್ಮಿ ಪ್ರಾರ್ಥಿಸಿ, ಪ್ರಾಧ್ಯಾಪಕ ಎಂ.ಕೆ. ಮಂಜು ಸ್ವಾಗತಿಸಿ, ಭವಿತ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.