ರಾಯಲ್ ಕ್ರಿಕೆಟ್ ಅಕಾಡೆಮಿ ಉದ್ಘಾಟನೆ
ಕ.ಪ್ರ.ವಾರ್ತೆ , ಹಾಸನ , ಡಿ. 18
ಹಳ್ಳಿಗಾಡಿನಲ್ಲಿ ಬೆಳೆದು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಎ. ಪಿ. ಅವಿನಾಶ್ ಉನ್ನತ ಸ್ಥಾನಕ್ಕೆ ಬೆಳೆದು ತಾಲೂಕಿಗೆ ಹಾಗೂ ಜಿಲ್ಲೆಗೆ ಹೆಸರು ತಂದಿರುವುದು ಹೆಮ್ಮೆಯ ವಿಚಾರ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಮಾತನಾಡಿದರು.
ಅವರು ಚನ್ನರಾಯಪಟ್ಟಣದ ವಿವೇಕಾನಂದ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಯಲ್ ಕ್ರಿಕೆಟ್ ಅಕಾಡೆಮಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಒಬ್ಬ ಕ್ರೀಡಾಪಟು ಅಕಾಡೆಮಿ ಮಾಡಿರುವುದು ಸಂತೋಷದ ವಿಷಯ, ಕ್ರಿಕೆಟ್ ಎನಿಸಿದ್ದು ಇಂಗ್ಲೆಂಡ್ನಲ್ಲಿ, ಆದರೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವುದು ಭಾರತ ದೇಶದಲ್ಲೇ. ಯುವ ಪೀಳಿಗೆಗೆ ಈ ಅಕಾಡೆಮಿ ಪ್ರೋತ್ಸಾಹ ನೀಡಿ ಬೆಳಸಲಿ ಎಂದು ಆಶಿಸಿದರು.
ಶಿಕ್ಷಕ ಸುರೇಶ್ ಮಾತನಾಡಿ, ತಂದೆ ತಾಯಿಗೆ ಮತ್ತು ಹುಟ್ಟಿದ ಊರಿಗೆ, ಕಲಿತ ಶಾಲೆಗೆ, ಗುರು-ಹಿರಿಯರಿಗೆ ಯಾರು ಗೌರವಿಸುತ್ತಾರೋ ಅವರು ಮುಂದಿನ ದಿನಗಳಲ್ಲಿ ಉತ್ತಮವಾದ ಮಟ್ಟಕ್ಕೆ ಹೋಗುತ್ತಾರೆ.
ಕಾರ್ಯಕ್ರಮದಲ್ಲಿ ಅಕಾಡೆಮಿಯ ಸಂಸ್ಥಾಪಕ ಮತ್ತು ಗೋವಾ ರಣಜಿ ಆಟಗಾರ ಎ. ಪಿ. ಅವಿನಾಶ್, ಜಯರಾಂ, ಜಯಂತಿ, ದಿನೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

