ಹಾಸನ

ಗೋಜುಕನ್ ಕರಾಟೆ ಶಾಲೆಗೆ 19 ಪದಕ

Published On :

ಹೊಳೆನರಸೀಪುರ: ಇಲ್ಲಿನ ಗೋಜುಕನ್ ಕರಾಟೆ ಅಸೋಸಿಯೇಷನ್‌ನ ವಿದ್ಯಾರ್ಥಿಗಳು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಇತ್ತೀಚೆಗೆ ನಡೆದ ಎರಡು ದಿನಗಳ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿ ಒಟ್ಟು 19 ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಂತನೆ: ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರವು ಪ್ರೌಢಶಾಲಾ ಮಕ್ಕಳಿಗಾಗಿ ಕರಾಟೆ ತರಬೇತಿಯನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿನ ದೈಹಿಕ ಶಿಕ್ಷಕರಿಗೆ ಕರಾಟೆ ತರಬೇತಿಯನ್ನು ನೀಡಲಾಗಿದ್ದು, ಅದರಲ್ಲಿಯೂ ವಿಶೇಷವಾಗಿ ಹೆಣ್ಣುಮಕ್ಕಳು ಆತ್ಮರಕ್ಷಣೆಯ ದೃಷ್ಟಿಯಿಂದ ಕರಾಟೆಯನ್ನು ಕಡ್ಡಾಯವಾಗಿ ಕಲಿಯಬೇಕೆನ್ನುವ ನಿಯಮವನ್ನೂ ತರಲು ಚಿಂತಿಸುತ್ತಿದೆ ಎಂದು ಕರಾಟೆಯ ಮಹತ್ವ ಹಾಗೂ ಜನಪ್ರಿಯತೆಯ ಕುರಿತಂತೆ ಕರಾಟೆ ಬ್ಲಾಕ್ ಬೆಲ್ಟ್ ವಿಜೇತ ತರಬೇತುದಾರ ಸೆಂಪಾಯ್ ಪಿ. ಸ್ವಾಮಿ ತಿಳಿಸಿದರು.
ಜೀವರಕ್ಷಕ ಕಲೆ: ಕೇಂದ್ರ ಸರ್ಕಾರವೂ ಕೂಡ ಮುಂದಿನ ದಿನಗಳಲ್ಲಿ ಪದವಿ ಹಂತದ ಶಿಕ್ಷಣದಲ್ಲೂ  ಕರಾಟೆಯನ್ನು ಅಳವಡಿಸುವ ಕುರಿತಂತೆಯೂ ಚಿಂತನೆಗಳು ನಡೆಯುತ್ತಿದ್ದು, ಕರಾಟೆ ಕಲೆಯು ಮುಂದಿನ ದಿನಗಳಲ್ಲಿ ಹೆಚ್ಚು ಉಪಯುಕ್ತ ಜೀವರಕ್ಷಕ ಕಲೆಯಾಗಿ ಜನಪ್ರಿಯಗೊಳ್ಳಲಿದೆ ಎಂದು ಹೇಳಿದರು.
ಕೊಳ್ಳೇಗಾಲದಲ್ಲಿ ಎರಡು ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಇಲ್ಲಿನ ಅಸೋಸಿಯೇಷನ್‌ನ 8 ವಿದ್ಯಾರ್ಥಿಗಳು ಭಾಗವಹಿಸಿ, ಉತ್ತಮ ಪ್ರದರ್ಶನ ನೀಡಿ, 4 ಚಿನ್ನ, 7 ಬೆಳ್ಳಿ ಹಾಗೂ 8 ಕಂಚಿನ ಪದಕಗಳನ್ನು ಪಡೆದಿದ್ದಾರೆ.
ಅಸೋಸಿಯೇಷನ್‌ನ ಪೋಷಕರಾದ ಪುರಸಭೆ ಮಾಜಿ ಸದಸ್ಯ ಬಾ.ರಾ. ಸುಬ್ಬರಾಯ, ಶ್ರೀ ಲಕ್ಷ್ಮೀನರಸಿಂಹ ವಿದ್ಯಾಮಂದಿರದ ಕಾರ್ಯದರ್ಶಿ ಹೊ.ಸು. ರಮೇಶ್, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ಪ್ರೊ. ಚಂದ್ರಕುಮಾರ್, ರೋಟರಿ ಸಂಸ್ಥೆಯ ಅಧ್ಯಕ್ಷ ಆರ್.ಬಿ. ಪುಟ್ಟೇಗೌಡ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಕುಮುದ ರಂಗನಾಥ್ ವಿತರಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಶ್ಲಾಘಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.