ಗ್ರಾಮಸಭೆಗೆ ಹೆಚ್ಚಿನ ಮಹತ್ವವಿದೆ: ಲಕ್ಷ್ಮಣ್
ಕ.ಪ್ರ.ವಾರ್ತೆ ಜಾವಗಲ್ ಡಿ. 19
ಗ್ರಾಮ ಸಭೆಗೆ ಹೆಚ್ಚಿನ ಮಹತ್ವವಿದೆ ಎಂದು ಜಾವಗಲ್ ಜಿಪಂ ಸದಸ್ಯ ಈ.ಎಚ್. ಲಕ್ಷ್ಮಣ್ ಅಭಿಪ್ರಾಯಪಟ್ಟರು. ಬುಧವಾರ ಜಾವಗಲ್ ಹೋಬಳಿ ಅರೆಕೆರೆ ಗ್ರಾಮ ಪಂಚಾಯ್ತಿಯ 2ನೇ ಸುತ್ತಿನ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯ್ತಿಗೆ ಆದಾಯ ಕ್ರೋಢೀಕರಿಸುವ ಮತ್ತು ಸಾರ್ವಜನಿಕರಿಗೆ ಉಪಯುಕ್ತವಾದ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಹೆಚ್ಚಿನ ಅವಕಾಶವಿದೆ ಎಂದರು.
ಗ್ರಾಮ ಸಭೆಯಲ್ಲಿ ಕೈಗೊಳ್ಳುವ ನಿರ್ಣಯಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕೆಂದರು. ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಉತ್ತೇಜನ ನೀಡಬೇಕೆಂದರು ಮತ್ತು ಆಧುನಿಕ ಬೇಸಾಯ ಪದ್ಧತಿಗೆ ಗಮನಹರಿಸಬೇಕೆಂದರು.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹೆಚ್ಚೆಚ್ಚು ಜಾಬ್ ಕಾರ್ಡ್ಗಳನ್ನು ಮಾಡಿಸಿ ಸರ್ಕಾರದಿಂದ ಹೆಚ್ಚಿನ ಆದಾಯ ಪಡೆದುಕೊಳ್ಳಬೇಕೆಂದರು.
ಎಚ್ಚರ ವಹಿಸಿ: ನೇರ್ಲಿಗೆ ತಾಪಂ ಸದಸ್ಯೆ ರಾಜೇಶ್ವರಿ ಶಿವಾನಂದ್ ಮಾತನಾಡಿ, ಅಧಿಕಾರಿಗಳ ಗೈರುಹಾಜರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮುಂದಿನ ಸಭೆಗಳಲ್ಲಿ ಈರೀತಿಯಾಗದಂತೆ ಎಚ್ಚರ ವಹಿಸಬೇಕೆಂದರು.
ಮಹಿಳೆಯರು ಶೌಚಾಲಯ ನಿರ್ಮಿಸಿಕೊಳ್ಳುವುದಕ್ಕೆ ಹೆಚ್ಚಿನ ಗಮನ ನೀಡಿ ಆರೋಗ್ಯ ಸುಧಾರಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಮಾಹಿತಿ: ಸಹಾಯಕ ತೋಟಾಗಾರಿಕಾ ಅಧಿಕಾರಿ ಮತ್ತು ನೋಡಲ್ ಅಧಿಕಾರಿ ಶಿವಕುಮಾರ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು ಕೃಷಿ, ತೋಟಗಾರಿಕೆ, ಕೃಷಿ ಅರಣ್ಯೀಕರಣ, ಸಾಮೂಹಿಕ ಕಣ ನಿರ್ಮಾಣ, ವಸತಿಯೋಜನೆ ಶೌಚಾಲಯ ನಿರ್ಮಾಣ ಜಲಾನಯನ ಅಭಿವೃದ್ಧಿಯಡಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಜೊತೆಗೆ ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಹನಿ ನೀರಾವರಿಗೆ ಮತ್ತು ಭೂಮಿಯ ಫಲವತ್ತತೆ ಹೆಚ್ಚಿಸಿಕೊಳ್ಳುವ ಬಗ್ಗೆ ರೈತರು ಗಮನ ಹರಿಸಬೇಕೆಂದರು.
ಪಶುಪಾಲನಾ ಸಹಾಯಕ ನಿರ್ದೇಶಕ ಡಾ. ಮಂಜುನಾಥ್ ಮಾತನಾಡಿ, ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಜಾವಗಲ್ ಹೋಬಳಿಯಲ್ಲಿ ಶೇ. 100ರಷ್ಟು ಕಾಲುಬಾಯಿ ರೋಗ ನಿರೋಧಕ ಲಸಿಕೆಯನ್ನು ಹಾಕಲಾಗಿದೆ ಎಂದರು.
ಅರಣ್ಯ ಇಲಾಖೆಯ ಜನಾರ್ಧನ್ ಮಾತನಾಡಿ, ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಆಯುಷ್ ಡಾ. ರವೀಂದ್ರ, ಗ್ರಾ.ಪಂ ಸದಸ್ಯ ಪುಟ್ಟಸ್ವಾಮಿ, ಪಿ.ಡಿ.ಓ ಜೆ.ವಿ ಬಸವರಾಜು ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಶೋಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವೆಂಕಟೇಶಪ್ಪ , ಸದಸ್ಯರಾದ ತಿಮ್ಮಪ್ಪ, ಕುಮಾರಸ್ವಾಮಿ, ಸೀತಾ, ರೇಣುಕಮ್ಮ , ನಿರ್ಮಲಾಬಾಯಿ, ಕಾರ್ಯದರ್ಶಿ ಸಾವಿತ್ರಮ್ಮ ಮಾಜಿ ಚೇರ್ಮನ್ ಎ.ಸಿ. ತಿಮ್ಮಪ್ಪ, ಧರ್ಮಪ್ಪ, ರವಿ, ರೇಣುಕಾಪ್ರಸಾದ್, ಓಂರಾಜು, ಯತೀಶ್, ಉಮೇಶ್, ಗ್ರಂಥಪಾಲಕ ಜಯಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

